ಮಡಿಕೇರಿ, ಜ. ೧೦: ಫೆ. ೧೮, ೧೯ ರಂದು ತಮಿಳು ಭಾಷಿಕರ ಕಾವೇರಿ ಕ್ರೀಡಾಕೂಟ-ಸಾಂಸ್ಕೃತಿಕ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಮಿಳು ಯೂತ್ ಫೆಡರೇಶನ್ ಕೊಡಗು ಘಟಕದಿಂದ ತಮಿಳು ಸಮುದಾಯ ಬಾಂಧವರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಹಬ್ಬ ಚೆಟ್ಟಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಎರಡು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು, ಫೆ. ೧೮ ರಂದು ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ

ಫೆ. ೧೯ ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಉಚಿತ ಆರೋಗ್ಯ ತಪಾಸಣೆ, ಮಹಿಳೆಯರಿಗೆ ಹಾಗೂ ಪುರುಷರಿಗೆ ಹಗ್ಗ ಜಗ್ಗಾಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಕ್ಕಳಿಗೆ, ಯುವಕರಿಗೆ, ಯುವತಿಯರಿಗೆ, ಮಹಿಳೆಯರಿಗೆ ಹಾಗೂ ವೃದ್ಧರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯುತ್ತವೆ. ವಿಶೇಷವಾಗಿ ಪುಟಾಣಿ ಮಕ್ಕಳ ಹಗ್ಗಜಗ್ಗಾಟ ಸ್ಪರ್ಧೆ ಕೂಡ ಇರಲಿದೆ. ಅಲ್ಲದೆ ಮಧ್ಯಾಹ್ನದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಸಾಂಸ್ಕೃತಿಕ ನೃತ್ಯ ಸ್ಪರ್ಧೆ, ಗೀತಗಾಯನ ಸ್ಪರ್ಧೆ ಹಾಗೂ ವಿವಿಧ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದಿರುವ ಸಮುದಾಯ ಬಾಂಧವರನ್ನು ಸನ್ಮಾನಿಸಲಿದ್ದು, ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ.೭೦ ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಕ್ರಿಕೆಟ್ ಪಂದ್ಯಾಟವು ಲೀಗ್ ಮಾದರಿಯಲ್ಲಿ ನಡೆಯಲಿದ್ದು, ಆಡಲಿಚ್ಚಿಸುವ ತಂಡಗಳು ಫೆಬ್ರವರಿ ೧೦ ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ೨೦೨೦-೨೧, ೨೦೨೧-೨೨ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತಗಳಲ್ಲಿ ಶೇ. ೭೦ ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ನಕಲಿ ಅಂಕಪಟ್ಟಿ, ಪಾಸ್ಪೋರ್ಟ್ ಅಳತೆಯ ಫೋಟೋ, ಸಂಪರ್ಕ ಸಂಖ್ಯೆ ಹಾಗೂ ಸಂಪೂರ್ಣ ವಿವರವನ್ನು ವಾಟ್ಸ್ಆ್ಯಪ್ ನಂಬರ್ +೯೧೯೯೪೫ ೧೦೩೦೧೨ ಅಥವಾ ಞoಜಚಿgu ಣಚಿmiಟಥಿouಣhಜಿ eಜeಡಿಚಿಣioಟಿ@ gmಚಿiಟ.ಛಿomಗೆ ಈಮೇಲ್ ಕಳುಹಿಸಿಸಬಹುದಾಗಿದೆ. ಕ್ರೀಡಾ ಕೂಟ, ಸಾಂಸ್ಕೃತಿಕ ಕಾರ್ಯಕ್ರಮದ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರ. ಕಾರ್ಯದರ್ಶಿ ಮೋಹನ್ ರಾಜ್ +೯೧೯೧೦೮ ೨೫೫೨೬೬ /+೯೧೯೯೪೫೧೦೩೦೧೨, ಕಾರ್ಯಕ್ರಮ ಸಂಚಾಲಕ, ಶಶಿ ಕುಮಾರ್ ಬಜೆಗೊಲ್ಲಿ +೯೧೯೬೮೬ ೯೬೧೨೦೩, ಕ್ರೀಡಾ ಸಂಚಾಲಕ ಮಂಜು ಬೆಟ್ಟದಕಾಡು +೯೧೯೫೩೫ ೨೮೪೯೦೪, ಸಂಘಟನಾ ಕಾರ್ಯ ದರ್ಶಿ ವಿಘ್ನೇಶ್ +೯೧೮೨೭೭೦೨೧೫೩೫ ಇವರನ್ನು ಸಂಪರ್ಕಿಸಬಹುದಾಗಿದೆ.

ಜಿಲ್ಲೆಯ ನಾನಾ ಕಡೆಗಳಲ್ಲಿ ನೆಲೆಸಿರುವ ಸಮುದಾಯ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ತಮಿಳ್ ಯೂತ್ ಫೆಡರೇಷನ್‌ನ ಪ್ರಧಾನ ಕಾರ್ಯದರ್ಶಿ ಮೋಹನ್‌ರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.