ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು
ಬೆಂಗಳೂರು, ಜ. ೧೦: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಬೆಳಗ್ಗೆ ಕುಸಿದು ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆ ಮತ್ತು ಇನ್ನೊಬ್ಬ ಮಗಳು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ತೇಜಸ್ವಿನಿ (೩೫) ಹಾಗೂ ವಿಹಾನ್ (೨ ವರ್ಷ ೬ ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್ನ ಹೆಚ್ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್ಗೆ ನಿಲ್ಲಿಸಿದಂತಹ ರಾಡ್ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿದೆ. ಮೃತರನ್ನು ತೇಜಸ್ವಿನಿ (೩೫) ಹಾಗೂ ವಿಹಾನ್ (೨ ವರ್ಷ ೬ ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್ನ ಹೆಚ್ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್ಗೆ ನಿಲ್ಲಿಸಿದಂತಹ ರಾಡ್ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿದೆ. ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ೪೦% ಕಮಿಷನ್ ಸರ್ಕಾರದ ಫಲಿತಾಂಶವಾಗಿದೆ. ಸರ್ಕಾರದ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಗುಣಮಟ್ಟವಿಲ್ಲ. ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳು ತಾವು ದುಡ್ಡು ಮಾಡಿಕೊಂಡು ಜನರಿಗೆ ಕಳಪೆ ಮಟ್ಟದ ಕೆಲಸ ಮಾಡಿಕೊಡುತ್ತಾರೆ. ಇದು ಸರ್ಕಾರದ ದಿವ್ಯ ನಿರ್ಲಕ್ಷ್ಯವಲ್ಲದೆ ಇನ್ನೇನು, ಸಾಮಾನ್ಯ ಜನರ ಜೀವನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಲೇಖಕಿ ಸಾರಾ ಅಬೂಬಕ್ಕರ್ ವಿಧಿವಶ
ಮಂಗಳೂರು, ಜ. ೧೦: ಕನ್ನಡದ ಲೇಖಕಿ ಸಾರಾ ಅಬೂಬಕ್ಕರ್ (೮೬) ವಯೋಸಹಜ ಕಾರಣಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯು ಸಿರೆಳೆದರು. ಗಡಿನಾಡು ಕಾಸರಗೋಡಿನ ಮಲಯಾಳಂ ಮಾತನಾಡುವ ಕುಟುಂಬದಲ್ಲಿ ವಕೀಲರಾದ ಪಿ. ಅಹಮದ್ ಮತ್ತು ಝೈನಬಿ ಅವರಿಗೆ ಜೂನ್ ೩೦, ೧೯೩೬ ರಂದು ಜನಿಸಿದರು. ಬೆಳೆಯುವಾಗಲೆ ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು. ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ. ಸುಮಾರು ೧೦ ಕಾದಂಬರಿ, ೬ ಕಥಾ ಸಂಕಲನಗಳು, ೫ ಬಾನುಲಿ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.
ರಾಹುಲ್ ವಿರುದ್ಧ ವೆಂಕಟೇಶ್ ಪ್ರಸಾದ್ ಕಿಡಿ
ನವದೆಹಲಿ, ಜ. ೧೦: ಸ್ಥಿರ ಪ್ರದರ್ಶನ ತೋರುವಲ್ಲಿ ವಿಫಲ ವಾಗುತ್ತಿದ್ದರೂ ನಿರಂತರವಾಗಿ ಕನ್ನಡಿಗ ಕೆ.ಎಲ್. ರಾಹುಲ್ ಅವರಿಗೆ ಟೀಂ ಇಂಡಿಯಾ ಆಯ್ಕೆದಾರರು ಮಣೆ ಹಾಕುತ್ತಿರುವುದಕ್ಕೆ ಕನ್ನಡಿಗರೇ ಆದ ವೇಗಿ ವೆಂಕಟೇಶ್ ಪ್ರಸಾದ್ ಕಿಡಿಕಾರಿದ್ದಾರೆ. ಅಲ್ಲದೇ ಇಶಾನ್ ಕಿಶಾನ್ ಗಿಂತ ಶುಭ್ ಮನ್ ಗಿಲ್ಗೆ ಎರಡನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ್ದಕ್ಕೂ ಪ್ರಸಾದ್ ಟೀಕಿಸಿದ್ದಾರೆ. ಈ ಸಂಬAಧ ಸರಣಿ ಟ್ವೀಟ್ ಮಾಡಿರುವ ಪ್ರಸಾದ್, ನಿಗದಿತ ಓವರ್ಗಳ ಪಂದ್ಯದಲ್ಲಿ ಭಾರತದ ಪ್ರದರ್ಶನಕ್ಕೆ ನೋವುಂಟು ಮಾಡುತ್ತಿರುವವರನ್ನು ಬದಲಾ ಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಏಕದಿನ ಸರಣಿಯಲ್ಲಿ ದ್ವಿಶತಕ ಭಾರಿಸಿದ ಆಟಗಾರನಿಗೆ ನ್ಯಾಯಯುತವಾಗಿ ಅವಕಾಶ ನೀಡಬೇಕು ಎಂದು ಅವರು ಹೇಳಿದ್ದಾರೆ. ಟೀಂ ಇಂಡಿಯಾ ಪರ ೩೩ ಟೆಸ್ಟ್ ಹಾಗೂ ೧೬೧ ಏಕದಿನ ಪಂದ್ಯಗಳನ್ನಾಡಿರುವ ವೆಂಕಟೇಶ್ ಪ್ರಸಾದ್, ಪ್ರಸ್ತುತ ಟೀಂ ಇಂಡಿಯಾದಲ್ಲಿ ಪ್ರದರ್ಶನ ತೋರುವವರಿಗೆ ಅವಕಾಶ ನೀಡುವಂತೆ ಆಯ್ಕೆದಾರರನ್ನು ಒತ್ತಾಯಿಸಿದ್ದಾರೆ.
ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡದ ಸರ್ಕಾರ : ಹೈಕೋರ್ಟ್ ಅತೃಪ್ತಿ
ಬೆಂಗಳೂರು, ಜ. ೧೦: ಗಣಿ ಉದ್ಯಮಿ ಮತ್ತು ರಾಜಕಾರಣಿ ಗಾಲಿ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ಬಿಜೆಪಿ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಐದು ವರ್ಷಗಳಿಂದ ಒಪ್ಪಿಗೆ ನೀಡುವ ಬಗ್ಗೆ ಏಕೆ ನಿರ್ಧಾರ ಕೈಗೊಂಡಿಲ್ಲ ಎಂದು ಪೀಠ ಸರ್ಕಾರವನ್ನು ಪ್ರಶ್ನಿಸಿದೆ. ಸರ್ಕಾರದ ಪ್ರಕಾರ, ಯಾವುದೇ ಕ್ರಮ ಕೈಗೊಳ್ಳದಿರುವುದು ಕೂಡ ಕ್ರಿಯೆ ಆಗಿರಬಹುದು. ಆದರೆ, ಇದು ನ್ಯಾಯಾಲಯಕ್ಕೆ ಸ್ವೀಕಾರಾರ್ಹವಲ್ಲ ಎಂದು ಪೀಠ ಹೇಳಿದೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿತ್ತು. ಅಕ್ರಮವಾಗಿ ಆಸ್ತಿಗಳನ್ನು ಸಂಗ್ರಹಿಸಲಾಗಿದೆ ಎಂದು ಆರೋಪಿಸಿದ್ದ ಕೇಂದ್ರೀಯ ತನಿಖಾ ದಳ (ಸಿಬಿಐ) ೨೦೨೨ರ ಆಗಸ್ಟ್ ೩೦ ರಂದು ಜನಾರ್ದನ ರೆಡ್ಡಿ ಅವರ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲು ಸರ್ಕಾರದ ಒಪ್ಪಿಗೆಯನ್ನು ಕೋರಿತ್ತು. ಆದರೆ, ಸರ್ಕಾರ ಇದುವರೆಗೂ ಒಪ್ಪಿಗೆ ನೀಡಿಲ್ಲ. ಈ ಬೆಳವಣಿಗೆಯ ಬೆನ್ನಲ್ಲೇ ಸಿಬಿಐ ಈ ಸಂಬAಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಿತ್ತು.
ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ
ಬೆAಗಳೂರು, ಜ. ೧೦: ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆ ಬೇರೆ ಆಯಾಮದಲ್ಲಿ ತನಿಖೆ ಆಗುತ್ತಿದ್ದು, ಎಲ್ಲಾ ರೀತಿಯ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುತ್ತದೆ. ಆತನ ಮೇಲೆ ದಾಖಲಾಗಿರುವ ಪ್ರತಿಯೊಂದು ಪ್ರಕರಣಗಳನ್ನು ತನಿಖೆ ಮಾಡುತ್ತೇವೆ ಎಂದರು. ಮಹಿಳೆ ಮೇಲೆ ಸುಳ್ಳು ಕೇಸ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಕಲಿ ಪ್ರಕರಣ ದಾಖಲಿಸಿ ಬಂಧನ ಮಾಡಿರುವುದು ಗೊತ್ತಾಗಿದೆ. ಈಗಾಗಲೇ ವರದಿ ಸಿದ್ದಪಡಿಸಲಾಗಿದೆ. ಈ ಸಂಬAಧ ಕಾನೂನು ಕ್ರಮ ಆಗುತ್ತದೆ. ಯಾವ ಅಧಿಕಾರಿ ಇದ್ದರೋ ಅವರ ವಿರುದ್ಧ ಕ್ರಮ ಅಗುತ್ತದೆ ಎಂದರು.
ಭಜರAಗದಳ ಕಾರ್ಯಕರ್ತನ ಮೇಲೆ ದಾಳಿ
ಸಾಗರ, ಜ. ೧೦: ಭಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬಾತನ ಮೇಲೆ ದುಷ್ಕರ್ಮಿಗಳು ಮಾರಕಾಸ್ತçಗಳಿಂದ ದಾಳಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಸಮೀರ್, ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆAದು ವರದಿಗಳಿಂದ ತಿಳಿದುಬಂದಿದೆ. ವಿಚಾರಣೆ ವೇಳೆ ತನ್ನ ತಂಗಿಯನ್ನು ಸುನೀರ್ ೪-೫ ತಿಂಗಳಿನಿAದ ಚುಡಾಯಿಸುತ್ತಿದ್ದು, ಈ ಹಿನ್ನೆಲೆ ಹಲ್ಲೆ ನಡೆಸಲು ಮುಂದಾಗಿದ್ದೆ ಎಂದು ಸಮೀರ್ ಎಂಬಾತ ಹೇಳಿಕೊಂಡಿದ್ದಾನೆAದು ವರದಿಗಳು ತಿಳಿಸಿವೆ. ಸಮೀರ್ ಕುರಿಗಾಹಿ ಯುವಕನಾಗಿರುವ ಕಾರಣ ಎಂದಿನAತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಮಚ್ಚನ್ನು ಇಟ್ಟುಕೊಂಡಿದ್ದ. ಆ ಮಚ್ಚಿನಿಂದ ಹಲ್ಲೆಗೆ ಮುಂದಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.