ಕುಶಾಲನಗರ, ಜ.೧೦ : ಕುಶಾಲನಗರ ನೇತಾಜಿ ಬಡಾವಣೆಯಲ್ಲಿ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಡಾವಣೆಯ ನಿವಾಸಿ ಸಂತೋಷ್ ಎಂಬುವರ ಪುತ್ರಿ ಜಸ್ಮಿತ (೧೯) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಯುವತಿ ಮಡಿಕೇರಿ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಮಹಜರು ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.