ಸೋಮವಾರಪೇಟೆ, ಜ. ೧೧: ಇತಿಹಾಸ ಪ್ರಸಿದ್ಧ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೋತ್ಸವ ತಾ.೧೩ ರಿಂದ (ನಾಳೆಯಿಂದ) ತಾ. ೧೭ರ ವರೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಶ್ರೀ ಕುಮಾರಲಿಂಗೇಶ್ವರ ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ.ಲೋಕೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ೯೦೦ ವರ್ಷಗಳ ಧಾರ್ಮಿಕ ಇತಿಹಾಸವಿರುವ ಕುಮಾರಲಿಂಗೇಶ್ವರ ದೇವಾಲಯದಲ್ಲಿ ತಾ. ೧೬ ರಂದು ೬೪ನೇ ವರ್ಷದ ಮಹಾ ರಥೋತ್ಸವ ಗ್ರಾಮಸ್ಥರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಮಧ್ಯಾಹ್ನ ೧೨.೦೫ಕ್ಕೆ ನಡೆಯಲಿದೆ ಎಂದರು.
ತಾ.೧೩ ರಂದು ‘ಬೆಳ್ಳಿ ಬಂಗಾರ ದಿನ’ ಆಚರಣೆಯೊಂದಿಗೆ ಸಂಜೆ ೬.೩೦ ರಿಂದ ಜಾತ್ರೆ ಪ್ರಾರಂಭೋತ್ಸವ ಪೂಜೆ ನಡೆಯಲಿದೆ. ತಾ. ೧೪ ರಂದು ‘ಮಕರ ಸಂಕ್ರಮಣ ಕರುವಿನ ಹಬ್ಬ’ ಹಾಗೂ
(ಮೊದಲ ಪುಟದಿಂದ) ೭ ಗಂಟೆಗೆ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸಲಾಗುತ್ತದೆ.
ತಾ. ೧೪ರಂದು ಕುಮಾರಳ್ಳಿ, ಜಕ್ಕನಳ್ಳಿ, ಕೊತ್ತನಳ್ಳಿ ಗ್ರಾಮಸ್ಥರು ಮತ್ತು ದೇವರ ಒಡೆಕಾರರು ಹಾಗೂ ಭಕ್ತಾದಿಗಳು ಪುಷ್ಪಗಿರಿ ಬೆಟ್ಟದಲ್ಲಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿಯ ಪಾದುಕೆಗಳಿಗೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸಲಿದ್ದಾರೆ ಎಂದರು.
ಸಂಘದ ಖಜಾಂಚಿ ಕಿರಣ್ಕುಮಾರ್ ಮಾತನಾಡಿ, ತಾ. ೧೫ರಂದು ‘ಅರಸು ಬಲ ಸೇವೆ’ ಪೂಜೆ ನಡೆಯಲಿದೆ. ಸಂಜೆ ೭.೩೦ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗುತ್ತವೆ. ಶ್ರೀಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ತಾ.೧೫ ರಂದು ಮಹಿಳೆಯರ ಅಂತರ್ ಜಿಲ್ಲಾಮಟ್ಟದ ಥ್ರೋಬಾಲ್, ಹಗ್ಗಜಗ್ಗಾಟ ಪಂದ್ಯಾಟ ಹಾಗೂ ತಾ. ೧೬ ರಂದು ಮ್ಯಾಟ್ ಕಬಡ್ಡಿ ಪಂದ್ಯಾಟಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ತಾ. ೧೬ ರಂದು ರಥೋತ್ಸವ ಜರುಗಲಿದ್ದು, ಸಾರ್ವಜನಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ತಾ. ೧೭ರಂದು ೩ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಚಿವ ಬಿ.ಎ. ಜೀವಿಜಯ, ಮಾಜಿ ಎಂಎಲ್ಸಿಗಳಾದ ಎಸ್.ಜಿ. ಮೇದಪ್ಪ, ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಹೈಕೋರ್ಟ್ ವಕೀಲರಾದ ಎಚ್.ಎಸ್. ಚಂದ್ರಮೌಳಿ, ಎ.ಎಸ್. ಪೊನ್ನಣ್ಣ, ಉದ್ಯಮಿಗಳಾದ ಬಿ.ಈ. ರಾಮಚಂದ್ರ, ಎನ್.ಎಂ. ಮುತ್ತಪ್ಪ, ಕಾಂಗ್ರೆಸ್ ಮುಖಂಡ ಡಾ. ಮಂಥರ್ಗೌಡ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಭಾಗವಹಿಸಲಿದ್ದಾರೆ.
ಇವರೊಂದಿಗೆ ದಾನಿಗಳಾದ ಎಚ್.ಎಸ್. ಚೇತನ್, ಕೆ.ಟಿ. ಸತೀಶ್, ದಿನೇಶ್, ತೇಜಸ್, ಸಂತೋಷ್, ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಸೇರಿದಂತೆ ವಿವಿಧ ಗ್ರಾ.ಪಂ. ಅಧ್ಯಕ್ಷರುಗಳಾದ ಆರ್. ವಿಶಾಲಾಕ್ಷಿ, ನವೀನ್, ಲಕ್ಷಿö್ಮ ಪಾಂಡಿಯನ್, ಮಹೇಶ್ ತಿಮ್ಮಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪ್ಪ, ಕುಮಾರಲಿಂಗೇಶ್ವರ ಯುವಕ ಸಂಘದ ಅಧ್ಯಕ್ಷ ಜಿ.ಎಂ. ಸಜನ್ ಮಂದಣ್ಣ ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಶಾಂತಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಮುತ್ತಣ್ಣ, ಧರ್ಮದರ್ಶಿ ಮಂಡಳಿ ಕಾರ್ಯದರ್ಶಿ ಕೆ.ಕೆ. ಮುತ್ತಣ್ಣ, ಪದಾಧಿಕಾರಿ ಕೆ.ಎಸ್. ರಮೇಶ್ ಉಪಸ್ಥಿತರಿದ್ದರು.