ಕುಶಾಲನಗರ, ಜ. ೧೦: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದು, ಮೂರು ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಎ ಅಯ್ಯಪ್ಪ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ಅಧೀಕ್ಷಕ ಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್ ನೇತೃತ್ವದಲ್ಲಿ ಕುಶಾಲನಗರ ಪೊಲೀಸ್ ಠಾಣಾ ಉಪ ನಿರೀಕ್ಷಕ ಅಪ್ಪಾಜಿ ಮತ್ತು ಸಿಬ್ಬಂದಿಗಳು ಕುಶಾಲನಗರ - ಹಾರಂಗಿ ರಸ್ತೆಯ ಮನೆಯೊಂದರ ಮೇಲೆ ದಾಳಿ ಮಾಡಿದ ಸಂದರ್ಭ ವೇಶ್ಯಾವಾಟಿಕೆ ನಡೆಸುತ್ತಿದ್ದ ಕೂಡ್ಲೂರು ಬಳಿಯ ಮಹಿಳೆೆಯನ್ನು ವಶಕ್ಕೆ ಪಡೆದಿದ್ದಾರೆ. ಮನೆಯಲ್ಲಿದ್ದ ಮೂರು ಮಂದಿ ಮಹಿಳೆಯರನ್ನು ರಕ್ಷಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.