ಕೂಡಿಗೆ, ಜ. ೧೦: ಹಾರಂಗಿ ಕುಶಾಲನಗರದವರೆಗಿನ ರಸ್ತೆಯು ತೀರಾ ಹಾಳಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ಪ್ರವಾಸಿಗರು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ವಾಹನ ಚಾಲನೆ ಮಾಡಿಕೊಂಡು ತೆರಳಲು ಬಾರಿ ತೊಂದರೆಗಳು ಆಗುತ್ತಿದ್ದವು. ಈ ಬಗ್ಗೆ ಸಾರ್ವಜನಿಕರು ಮತ್ತು ಈ ಭಾಗದ ಜನಪ್ರತಿನಿಧಿಗಳು ಸಂಬAಧಿಸಿದ ನೀರಾವರಿ ಇಲಾಖೆಗೆ ಮತ್ತು ಶಾಸಕರ ಗಮನಕ್ಕೆ ತಂದಿದ್ದರು.
ಅದರAತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅÀವರು ನೀರಾವರಿ ಇಲಾಖೆಯ ಮೂಲಕ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿಸಲು ಸೂಚನೆ ನೀಡಿದರು ಅದರ ಅನುಗುಣವಾಗಿ ಕಾವೇರಿ ನೀರಾವರಿ ನಿಗಮದ ಮೂಲಕ ಈಗಾಗಲೇ ರೂ.೧೦ ಕೋಟಿ ಹಣ ಬಿಡುಗಡೆ ಯಾಗಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಕಾಮಗಾರಿಯನ್ನು ಆರಂಭ ಮಾಡಲಾಗುವುದು ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಹಾರಂಗಿ ಕುಶಾಲನಗರ ರಸ್ತೆಯ ಕಾಮಗಾರಿಯ ಕ್ರಿಯಾ ಯೋಜನೆ ಅನುಗುಣವಾಗಿ ಟೆಂಡರ್ ಪ್ರಕ್ರಿಯೆ ನಡೆದಿದ್ದು ಈಗಾಗಲೇ ಹಾರಂಗಿಯಿAದ ಕುಶಾಲನಗರದವರೆಗೆ ಸ್ವಲ್ಪ ಭಾಗದ ಅಗಲಿಕರಣ, ಸೇರಿದಂತೆ ಡಾಂಬರೀಕಣದ ಕಾಮಗಾರಿಗೆ ಎಲ್ಲಾ ಸಿದ್ಧತೆಗಳು ನಡೆದಿವೆ. ಕಾಮಗಾರಿಗೆ ಬೇಕಾಗುವ ಕಚ್ಚಾವಸ್ತುಗಳು ದೊರೆತ ತಕ್ಷಣವೇ ಕಾಮಗಾರಿಯನ್ನು ಆರಂಭ ಮಾಡಲಾಗುವುದು ಎಂದು ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ತಿಳಿಸಿದ್ದಾರೆ.