ಮಡಿಕೇರಿ, ಜ. ೧೧: ಹೊದ್ದೂರು ಗ್ರಾಮದ ಶ್ರೀ ಬೇಟೆ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾAತಿ ಹಬ್ಬದ ಪ್ರಯುಕ್ತ ತಾ. ೧೪ ರಂದು ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.

ಅಂದು ಬೆಳಿಗ್ಗೆ ೯ ಗಂಟೆಗೆ ಗಣಪತಿ ಹೋಮ, ಗುರು ಗಣಪತಿ ಪೂಜೆ, ಪುಣ್ಯಾಹ ವಾಚನ, ಮಂತ್ರ ಪಾರಾಯಣ, ಶ್ರೀ ಸುಬ್ರಹ್ಮಣ್ಯ ಪೂಜೆ, ಶ್ರೀ ಅಯ್ಯಪ್ಪ ದೇವರ ಆರಾಧನೆ, ಮಂಗಳಾರತಿ, ಪ್ರಸಾದ ವಿತರಣೆ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.