ಕೂಡಿಗೆ, ಜ. ೧೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಆನೆಕೆರೆಯ ಜಾಗವನ್ನು ಬೌಂಡರಿ ಗುರುತಿಸಿ ಬಫರ್ ಇರುವಿಕೆಯನ್ನು ಗುರುತಿಸುವ ಸಮರ್ಪಕವಾದ ಸರ್ವೆಯನ್ನು ಕಂದಾಯ ಇಲಾಖೆಯ ಮೂಲಕ ನಡೆಸಿ ಅದಕ್ಕೆ ಸಂಬAಧಿಸಿದ ದಾಖಲೆಗಳನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್, ಕುಶಾಲನಗರ ತಾಲೂಕು ಉಪ ತಹಶೀಲ್ದಾರ್ ಮಧುಸೂದನ್, ಕಂದಾಯ ನಿರೀಕ್ಷಕ ಸಂತೋಷ್, ಸರ್ವೆ ಇಲಾಖೆಯ ಅಧಿಕಾರಿ ವೆಂಕಟೇಶ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಸಹಾಯಕ ಲೋಕೇಶ್, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.