ಮುಳ್ಳೂರು, ಜ. ೧೧: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್ಗೆ ಆಕಸ್ಮಿಕವಾಗಿ ತಾಯಿಯ ತಲೆ ಸಿಲುಕಿದ ಸಂದರ್ಭ ಸಮಯಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ಬಾಲಕ ದೀಕ್ಷಿತ್ ೨೦೨೨-೨೩ನೇ ಸಾಲಿನ ರಾಷ್ಟಿçÃಯ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾನೆ. ದೀಕ್ಷಿತ್ (೯) ಕೊಡ್ಲಿಪೇಟೆ ಹೋಬಳಿಯ ಬೆಸೂರು ಗ್ರಾ.ಪಂ. ವ್ಯಾಪ್ತಿಯ ಕೂಡ್ಲೂರು ಗ್ರಾಮದ ನಿವಾಸಿ ರವಿ ಕುಮಾರ್ ಮತ್ತು ಅರ್ಪಿತ ದಂಪತಿ ಪುತ್ರನಾಗಿದ್ದು, ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೩ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾನೆ.

ದೀಕ್ಷಿತ್ ತಾಯಿ ಅರ್ಪಿತ ೨೦೨೨ ನವೆಂಬರ್ ೨೪ ರಂದು ಕೂಡ್ಲೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಚಾಲನೆಯಲ್ಲಿದ್ದ ಗಿರಣಿಯ ಬೆಲ್ಟ್ಗೆ ಅರ್ಪಿತ ಅವರ ತಲೆ ಸಿಲುಕಿಕೊಡಾಗ ಅವರು ಜೋರಾಗಿ ಕಿರುಚಿಕೊಂಡಿದ್ದಾರೆ. ಗಿರಣಿ ಪಕ್ಕದಲ್ಲಿ ಆಟವಾಡುತ್ತಿದ್ದ ಬಾಲಕ ದೀಕ್ಷಿತ್ ತಾಯಿಯ ಕೂಗು ಕೇಳಿಸಿಕೊಂಡು ಓಡಿ ಬಂದು ಹಿಟ್ಟಿನ ಗಿರಣಿಯ ವಿದ್ಯುತ್ ಸರಬರಾಜು ಸ್ವಿಚ್ ಆಫ್ ಮಾಡುವ ಮೂಲಕ ಸಮಯ ಪ್ರಜ್ಞೆ ಮೆರೆದು ತಾಯಿಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದ.

ಇಂಡಿಯನ್ ಕೌನ್ಸಿಲ್ ಫಾರ್ ಚಿಲ್ಡೆçನ್ ವೆಲ್ಫೆರ್ ಇಲಾಖೆಯಿಂದ ಕೊಡ ಮಾಡುವ ರಾಷ್ಟಿçÃಯ ಶೌರ್ಯ ಪ್ರಶಸ್ತಿಗೆ ದೀಕ್ಷಿತ್ ಆಯ್ಕೆಯಾಗಿದ್ದಾನೆ. ದೆಹಲಿಯಲ್ಲಿ ತಾ. ೨೬ ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ ೨೦೨೨-೨೩ನೇ ಸಾಲಿನ ರಾಷ್ಟಿçÃಯ ಶೌರ್ಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದೀಕ್ಷಿತ್ ರಾಷ್ಟಿçÃಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ಬಾಲಕನ ಪೋಷಕರು ತಿಳಿಸಿದ್ದಾರೆ.