ಸೋಮವಾರಪೇಟೆ, ಜ. ೧೧: ತಾಲೂಕಿನ ಬ್ಯಾಡಗೊಟ್ಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಲೋಕೋಪಯೋಗಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ರೂ. ೧೭ ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಲೋಕೋಪ ಯೋಗಿ ಇಲಾಖೆಯ ಮೂಲಕ ೧೭ ಲಕ್ಷದ ವೆಚ್ಚದಲ್ಲಿ ಕಟ್ಟಡವನ್ನು ನಿರ್ಮಿಸಿಲಾಗಿದ್ದು ಈ ಗ್ರಾಮದಲ್ಲಿ ಹೆಚ್ಚಿನ ಮಕ್ಕಳು ಅಂಗನವಾಡಿಗೆ ಬರುತ್ತಿರುವುದು ಶ್ಲಾಘನೀಯ. ಬಾಲ್ಯಾವಸ್ಥೆಯ ಮಕ್ಕಳು ಅಂಗನವಾಡಿಗೆ ಆಗಮಿಸುವುದರಿಂದ ಪೌಷ್ಠಿಕಾಂಶಯುಕ್ತ ಆಹಾರದೊಂದಿಗೆ ಶೈಕ್ಷಣಿಕ ಪ್ರಗತಿ ಸಾಧಿಸಬಹುದು ಎಂದರು. ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀನಾ ಪರಮೇಶ್, ಉಪಾಧ್ಯಕ್ಷೆ ರೇಣುಕಾ ಮೇದಪ್ಪ, ಸದಸ್ಯರಾದ ಮೋಕ್ಷಿಕ್ ರಾಜ್, ಪಾವನ ಗಗನ್, ದಾಕ್ಷಾಯಿಣಿ ಕಾಂತರಾಜ್, ಅಭಿವೃದ್ಧಿ ಅಧಿಕಾರಿ ಗಿರೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಅಣ್ಣಯ್ಯ, ಅಂಗನವಾಡಿ ಶಿಕ್ಷಕಿ ಚಿನ್ನಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.