ವೀರಾಜಪೇಟೆ, ಜ. ೧೧: ಅಂಕ ಗಳಿಸುವ ಉದ್ದೇಶದಿಂದ ಮಕ್ಕಳನ್ನು ವಿಪರೀತ ಒತ್ತಡಕ್ಕೆ ಸಿಲುಕಿಸುವುದು ಉತ್ತಮ ಬೆಳವಣಿಗೆಯಲ್ಲ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಡಿ.ಅರ್ಚನಾ ಭಟ್ ಅಭಿಪ್ರಾಯಪಟ್ಟರು. ಇಲ್ಲಿನ ಬ್ರೆöÊಟ್ ಪಬ್ಲಿಕ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಪೋಷಕರು ತಾವು ಸ್ವತಃ ಬದುಕಿನಲ್ಲಿ ಏನೂ ಸಾಧನೆ ಮಾಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಮಕ್ಕಳನ್ನು ಅನಾರೋಗ್ಯಕರ ಸ್ಪರ್ಧೆಗೆ ಒಡ್ಡಿ ಒತ್ತಡಕ್ಕೆ ಸಿಲುಕಿಸುವುದು ದುಷ್ಪರಿಣಾಮ ಉಂಟು ಮಾಡುತ್ತದೆ. ಅರ್ಹತೆ, ಆಸಕ್ತಿ ಮತ್ತು ಪ್ರತಿಭೆಗೆ ಅನುಸಾರವಾಗಿ ಮಕ್ಕಳು ಆಯಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಾರೆ ಇದಕ್ಕೆ ಪೋಷಕರು ಪ್ರೋತ್ಸಾಹ ನೀಡಬೇಕೆಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿ, ಮಕ್ಕಳು ಉತ್ತಮ ಅಂಕ ಪಡೆದು ಉನ್ನತ ಶಿಕ್ಷಣ ಹಾಗೂ ಸ್ಥಾನ-ಮಾನ ಗಳಿಸಬೇಕು ಎಂಬ ಅಭಿಲಾಷೆ ಪ್ರತಿಯೊಬ್ಬ ಪೋಷಕರಲ್ಲಿ ಇರುವುದು ಸಹಜ. ಆದರೆ ಹೆಚ್ಚಿನ ಅಂಕ ಗಳಿಸುವುದು ಮಾತ್ರ ಶಿಕ್ಷಣದ ಗುರಿಯಲ್ಲ. ಚಾರಿತ್ರö್ಯವಂತ ಪ್ರಜೆಗಳ ನಿರ್ಮಾಣ ಶಿಕ್ಷಣದ ಗುರಿಯಾಗಬೇಕು ಎಂದರು.

ಪುರಸಭಾ ಸದಸ್ಯರುಗಳಾದ ಮುಹಮ್ಮದ್ ರಾಫಿ, ಎಸ್.ಹೆಚ್. ಮತೀನ್, ಸಮಾಜ ಸೇವಕರಾದ ಡಾ. ಬಾದ್‌ಷಾ, ನಿಯಾಝ್ ಅಹಮದ್, ಗೌರವ ಕಾರ್ಯದರ್ಶಿ ಪಿ.ಕೆ. ಅಬ್ದುಲ್ ರೆಹೆಮಾನ್ ಮಾತ ನಾಡಿದರು. ಇಸ್ಲಾಮಿಕ್ ಸರ್ವಿಸ್ ಟ್ರಸ್ಟ್ ಅಧ್ಯಕ್ಷ ಕೆ.ಪಿ.ಕೆ. ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಮಿಥಿಲೇಶ್ ಕುಮಾರ್ ಶಾಲಾ ವರದಿ ಮಂಡಿಸಿದರು. ಶೈಕ್ಷಣಿಕ ವರ್ಷದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಪಾರಿತೋಷಕಗಳನ್ನು ನೀಡಲಾಯಿತು. ಪಿ.ಕೆ. ಸಮೀಜ್ ಅವರ ಖಿರಾಅತ್‌ನೊಂದಿಗೆ ಕಾರ್ಯಕ್ರಮ ಪ್ರಾರಂಭಗೊAಡಿತು. ಆಶಾ ಹಾಗೂ ಮಿಸ್ಬಾ ಫಾತಿಮಾ ನಿರೂಪಿಸಿದರು. ಶಾಲಾ ಆಡಳಿತಾಧಿಕಾರಿ ಕೆ.ಟಿ. ಬಷೀರ್ ಸ್ವಾಗತಿಸಿದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.