ಮಡಿಕೇರಿ, ಜ. ೧೧: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಎಂಬಾತ ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಆ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ದೂರು ನೀಡಿದ್ದು, ಅದರನ್ವಯ ಮನೋಹರ್ ನಾಯಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೇ ಘಟನೆಗೆ ಸಂಬAಧಿಸಿದAತೆ ಶಾಲಾ ಆಡಳಿತ ಮಂಡಳಿ ಮನೋಹರ್ ನಾಯಕ್‌ನನ್ನು ಅಮಾನತುಗೊಳಿಸಿದೆ. ಮನೋಹರ್ ನಾಯಕ್ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.