ಐಸಿಸ್ ಸಂಚು ಪ್ರಕರಣ:ಭಯೋತ್ಪಾದಕರ ಬಂಧನ

ನವದೆಹಲಿ, ಜ. ೧೧: ಶಿವಮೊಗ್ಗ ಐಸಿಸ್ ಸಂಚು ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್‌ಐಎ) ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ಆರೋಪಿಗಳು ರೂಪಿಸಿದ ಸಂಚಿಗೆ ಸಂಬAಧಿಸಿದAತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು. ಈ ಪ್ರಕರಣವು ಕಳೆದ ವರ್ಷ ಸೆಪ್ಟೆಂಬರ್ ೧೯ ರಂದು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು ಮತ್ತು ಕಳೆದ ವರ್ಷ ನವೆಂಬರ್ ೪ ರಂದು ಎನ್‌ಐಎ ತನಿಖೆಯನ್ನು ವಹಿಸಿಕೊಂಡಿತ್ತು. ಆರೋಪಿ ಮಾಜ್ ಮುನೀರ್ ಎಂಬಾತ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಿವಾಸಿಯಾದ ಮಜಿನ್ ಅಬ್ದುಲ್ ರಹಮಾನ್ ಎಂಬಾತನನ್ನು ಉಗ್ರಗಾಮಿಯನ್ನಾಗಿ ಮಾಡಿ ನೇಮಕಾತಿ ಮಾಡಿಕೊಂಡಿದ್ದ. ಆದರೆ, ಮತ್ತೋರ್ವ ಆರೋಪಿ ಸೈಯದ್ ಯಾಸಿನ್ ದಾವಣಗೆರೆ ಮೂಲದ ನದೀಮ್ ಅಹ್ಮದ್‌ನನ್ನು ತೀವ್ರಗಾಮಿಯನ್ನಾಗಿ ಮಾಡಿ ಕೆಲಸಕ್ಕೆ ಸೇರಿಸಿ ಕೊಂಡಿದ್ದ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ಇಬ್ಬರನ್ನೂ ಆಮೂಲಾಗ್ರಗೊಳಿಸಲಾಗಿದೆ ಮತ್ತು ನೇಮಕ ಮಾಡಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿದೆ. ಆರೋಪಿಗಳು ಇಸ್ಲಾಮಿಕ್ ಸ್ಟೇಟ್‌ನ ಚಟುವಟಿಕೆಗಳನ್ನು ಮುಂದುವರಿಸಲು ದೊಡ್ಡ ಪಿತೂರಿಯ ಭಾಗವಾಗಿ ವಿಧ್ವಂಸಕ ಮತ್ತು ಬೆಂಕಿ ಹಚ್ಚುವ ಕೃತ್ಯಗಳಿಗೆ ಪ್ರಯತ್ನಿಸಿದರು ಅಥವಾ ಮಾಡಿದ್ದಾರೆ ಎಂದು ಗಣ್ಯ ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆ ಹೇಳಿದೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಅಮೇರಿಕದಾದ್ಯಂತ ವಿಮಾನಗಳ ಹಾರಾಟ ಸ್ಥಗಿತ

ನ್ಯೂಯಾರ್ಕ್, ಜ. ೧೧: ಫೆಡರಲ್ ಏವಿಯೇಷನ್ ಅಡ್ಮಿನಿಸ್ಟೆçÃಷನ್‌ನಲ್ಲಿ ತಾಂತ್ರಿಕ ದೋಷದಿಂದ ಕಂಪ್ಯೂಟರ್ ಸ್ಥಗಿತಗೊಂಡ ನಂತರ ಅಮೆರಿಕದಾದ್ಯಂತ ಎಲ್ಲಾ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸಲಾಗಿದೆ. ಫ್ಲೆöÊಟ್‌ಅವೇರ್‌ನ ಫ್ಲೈಟ್ ಟ್ರ‍್ಯಾಕಿಂಗ್ ವೆಬ್‌ಸೈಟ್ ಪ್ರಕಾರ, ಬೆಳಿಗ್ಗೆ ೬.೩೦ಕ್ಕೂ ಮುನ್ನ ಅಮೆರಿಕದ ಒಳಗೆ ಬರುವ ಅಥವಾ ಹೊರಗೆ ಹೋಗುವ ಸುಮಾರು ೭೬೦ ವಿಮಾನಗಳು ವಿಳಂಬವಾಗಿವೆ. ಕಂಪ್ಯೂಟರ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ವಾಯುಪ್ರದೇಶದ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರುತ್ತಿದೆ. ನಾವು ಪರಿಶೀಲನೆ ನಡೆಸುತ್ತಿದ್ದೇವೆ ಮತ್ತು ಈಗ ಸಿಸ್ಟಮ್ ಅನ್ನು ಮರುಲೋಡ್ ಮಾಡುತ್ತಿದ್ದೇವೆ ಎಂದು ಎಫ್‌ಎಎ ತಿಳಿಸಿದೆ. ಈಗ ಉಂಟಾಗಿರುವ ಅಡೆತಡೆಗಳ ಕುರಿತು ಅಥವಾ ವಿಮಾನ ನಿಲ್ದಾಣ ಸೌಲಭ್ಯ ಸೇವೆಗಳಲ್ಲಿನ ಯಾವುದೇ ಬದಲಾವಣೆ ಮತ್ತು ಪರಿಷ್ಕೃತ ಮಾಹಿತಿ ಪ್ರಕ್ರಿಯೆ ನಡೆಯುತ್ತಿಲ್ಲ ಎಂಬ ಎಚ್ಚರಿಕೆಯನ್ನು ಪೈಲಟ್‌ಗಳಿಗೆ ಹಾಗೂ ಇತರೆ ವಿಮಾನ ಸಿಬ್ಬಂದಿಗೆ ತನ್ನ ವ್ಯವಸ್ಥೆ ಮೂಲಕ ಎಚ್ಚರಿಕೆ ರವಾನಿಸಲಾಗಿದೆ ಎಂದು ಹೇಳಿದೆ.

ಆಹಾರ ನಿಗಮದಲ್ಲಿ ಭ್ರಷ್ಟಾಚಾರ : ಸಿಬಿಐ ದಾಳಿ

ನವದೆಹಲಿ, ಜ. ೧೧: ಭಾರತೀಯ ಆಹಾರ ನಿಗಮ(ಎಫ್‌ಸಿಐ)ದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಸಿಬಿಐ ನಿಗಮದ ಡಿಜಿಎಂ ಶ್ರೇಣಿಯ ಅಧಿಕಾರಿಯನ್ನು ಬಂಧಿಸಿದೆ ಮತ್ತು ಪಂಜಾಬ್, ಹರಿಯಾಣ ಮತ್ತು ದೆಹಲಿ ಸೇರಿದಂತೆ ದೇಶದ ೫೦ ಸ್ಥಳಗಳಲ್ಲಿ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಫ್‌ಸಿಐನಲ್ಲಿ ತಾಂತ್ರಿಕ ಸಹಾಯಕರಿಂದ ಕಾರ್ಯನಿರ್ವಾಹಕ ನಿರ್ದೇಶಕರವರೆಗಿನ ಎಲ್ಲಾ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಎಫ್‌ಸಿಐನಲ್ಲಿ ೫೦,೦೦೦ ಲಂಚ ಪಡೆಯುತ್ತಿದ್ದ ಡೆಪ್ಯುಟಿ ಜನರಲ್ ಮ್ಯಾನೇಜರ್(ಡಿಜಿಎಂ)ನನ್ನು ಸಿಬಿಐ ಬಂಧಿಸಿದ ನಂತರ ೫೦ ಸ್ಥಳಗಲ್ಲಿ ಶೋಧ ಆರಂಭಿಸಲಾಗಿದೆ. ಎಫ್‌ಸಿಐನಲ್ಲಿ ಭ್ರಷ್ಟಾಚಾರಕ್ಕೆ ಸಂಬAಧಿಸಿದAತೆ ಸಿಬಿಐಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿAದ ಕೇಂದ್ರ ತನಿಖಾ ಸಂಸ್ಥೆ ಗುಪ್ತಚರ ಮಾಹಿತಿ ಕಲೆ ಹಾಕುತ್ತಿತ್ತು.

ಸ್ಯಾಂಟ್ರೋ ರವಿ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು, ಜ. ೧೧: ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬAಧಿಸಿದAತೆ ತನಿಖೆ ನಡೆಸುತ್ತಿರುವ ಪೊಲೀಸ್ ವಿಶೇಷ ತಂಡ ರವಿಯ ಪತ್ನಿಯ ಮನೆ ಮೇಲೆ ದಾಳಿ ಮಾಡಿದ್ದು, ಡೈರಿ, ಗ್ಯಾಸ್ ಬಿಲ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸುತ್ತಿರುವ, ವೇಶ್ಯಾವಾಟಿಕೆ, ವರ್ಗಾವಣೆ ದಂಧೆಗಳಲ್ಲಿ ಭಾಗಿ ಆರೋಪಕ್ಕೆ ಸಂಬAಧಿಸಿದAತೆ ಮೈಸೂರಿನ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ತನಿಖೆಯನ್ನು ಅಧಿಕಾರಿಗಳು ತೀವ್ರಗೊಳಿಸಿದ್ದು, ಇಂದು ಆತನ ಮೊದಲ ಪತ್ನಿಯ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರವಿಯ ಮೊದಲ ಪತ್ನಿಯ ರಾಜರಾಜೇಶ್ವರಿ ನಗರದ ನಿವಾಸಕ್ಕೆ ಇಂದು ವಿಶೇಷ ಪೊಲೀಸ್ ಪಡೆಯ ೩೦ ಸಿಬ್ಬಂದಿ ಏಕಾಏಕಿ ದಾಳಿ ಮಾಡಿದ್ದು, ಶೋಧ ನಡೆಸಿದ್ದಾರೆ.

ಡ್ರಗ್ಸ್ ಪೆಡ್ಲಿಂಗ್-ವೈದ್ಯ, ವೈದ್ಯಕೀಯ ವಿದ್ಯಾರ್ಥಿಗಳ ಬಂಧನ

ಮAಗಳೂರು, ಜ. ೧೧: ಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿರುವ ಪೊಲೀಸರು ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ೧೦ ಮಂದಿಯನ್ನು ಬಂಧಿಸಿದ್ದಾರೆ. ವೈದ್ಯರು ಹಾಗೂ ಪ್ರತಿಷ್ಠಿತ ಖಾಸಗಿ ಕಾಲೇಜುಗಳ ವೈದ್ಯಕೀಯ ವಿದ್ಯಾರ್ಥಿಗಳು ಬಂಧನಕ್ಕೊಳಗಾದವರ ಪೈಕಿ ಇದ್ದು, ಆರೋಪಿಗಳು ನಗರದ ಬಂಟ್ಸ್ ಹೊಟೇಲ್ ಬಳಿ ಇದ್ದ ಫ್ಲಾಟ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಜನರಿಗೆ ಗಾಂಜಾ ಮಾರಾಟ ಮಾಡ್ತುತಿದ್ದರು ಎಂದು ಮಂಗಳೂರಿನ ಸಿಸಿಬಿ ಅಧಿಕಾರಿ ಶ್ಯಾಮ್ ಸುಂದರ್ ಹೇಳಿದ್ದಾರೆ.

ಅಣೆಕಟ್ಟು ನಿರ್ಮಾಣ ಸ್ಥಗಿತಕ್ಕೆ ಗೋವಾ ಸರ್ಕಾರ ನೋಟಿಸ್

ಬೆಳಗಾವಿ, ಜ. ೧೧: ಕೇಂದ್ರ ಸರ್ಕಾರವು ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಅನುಮೋದನೆ ನೀಡಿದ ಬಳಿಕ ಕಳಸಾ-ಬಂಡೂರಿ ಯೋಜನೆ ಜಾರಿಗೆ ರಾಜ್ಯ ಸರ್ಕಾರವು ಮುಂದಾಗಿದ್ದು, ಇದಕ್ಕೆ ಗೋವಾ ಸರ್ಕಾರ ಅಡ್ಡಿಯುಂಟು ಮಾಡಿದೆ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ನೋಟಿಸ್ ಜಾರಿಗೊಳಿಸಿದ್ದಾರೆಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಯೋಜನಾ ಸ್ಥಳವು ಮಹದಾಯಿ ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವುದರಿಂದ ಕರ್ನಾಟಕ ಸರ್ಕಾರಕ್ಕೆ ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ನೋಟೀಸ್ ಜಾರಿ ಮಾಡಿದ್ದು, ನೋಟೀಸ್‌ಗೆ ಪ್ರತಿಕ್ರಿಯೆ ನೀಡದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಪರಿಸರ ಮತ್ತು ಅರಣ್ಯ ಸಚಿವಾಲಯದ (ಎಂಒಇಎಫ್) ತಂಡವು ಯೋಜನೆ ಅನುಷ್ಠಾನಗೊಳ್ಳುವ ಅರಣ್ಯ ಭೂಮಿಯನ್ನು ಪರಿಶೀಲನೆ ನಡೆಸಿತು. ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಹಲವು ಉನ್ನತ ಅರಣ್ಯ ಇಲಾಖೆ ಅಧಿಕಾರಿಗಳು ತಂಡಕ್ಕೆ ಮಾಹಿತಿ ನೀಡಿದರು. ಈ ತಂಡ ಬುಧವಾರ ಅಥಣಿ ಸಮೀಪದ ತೆಲಸಂಗಕ್ಕೆ ಭೇಟಿ ನೀಡಿ, ಅರಣ್ಯ ಇಲಾಖೆಗೆ ರಾಜ್ಯ ಸರ್ಕಾರ ಮಂಜೂರು ಮಾಡುತ್ತಿರುವ ಅರಣ್ಯ ಭೂಮಿಗೆ ಬದಲಿಯಾಗಿ ನೀಡುತ್ತಿರುವ ವಿಶಾಲವಾದ ಭೂಮಿಯನ್ನು ಪರಿಶೀಲಿಸಲಿದೆ ಎಂದು ಉನ್ನತ ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಗೆ ಶಿವಸೇನೆ ಬೆಂಬಲ

ಶ್ರೀನಗರ, ಜ. ೧೧: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶಿವಸೇನೆ ಬೆಂಬಲ ಘೋಷಿಸಿದ್ದು, ಮುಂದಿನ ವಾರ ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಅಲ್ಲಿನ ಸ್ಥಳೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಪಕ್ಷ ಘೋಷಿಸಿದೆ. ಶಿವಸೇನೆ ನಾಯಕ ಮನೀಷ್ ಸಹ್ನಿ ಈ ಬಗ್ಗೆ ಘೋಷಣೆ ಮಾಡಿದ್ದು, ಭಾರತ್ ಜೋಡೋ ನಡಿಗೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಶಿವಸೇನೆ ಭಾಗವಹಿಸಲಿದೆ ಎಂದು ಹೇಳಿದ್ದಾರೆ. ಮನೀಷ್ ಸಹ್ನಿ ಜಮ್ಮು-ಕಾಶ್ಮೀರದ ಶಿವಸೇನೆ (ಉದ್ಧವ್ ಬಣ) ಅಧ್ಯಕ್ಷರಾಗಿದ್ದು, ಧರ್ಮ ಹಾಗೂ ದ್ವೇಷವನ್ನೇ ಬಂಡವಾಳವಾಗಿಟ್ಟುಕೊAಡು ರಾಜಕಾರಣ ನಡೆಸುತ್ತಿರುವವರಿಗೆ ರಾಹುಲ್ ಗಾಂಧಿ ಭಾರತ್ ಜೋಡೋ ಮೂಲಕ ತಕ್ಕ ಉತ್ತರ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.