ಕಣಿವೆ, ಜ. ೧೨: ಇಲ್ಲಿಗೆ ಸಮೀಪದ ವಿಜಯನಗರದ ನಿವಾಸಿ ಸಮಾಜ ಸೇವಕ ನಾಗರಾಜು ಅವರಿಗೆ ಕಾಯಕಯೋಗಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಬೆಂಗಳೂರಿನ ಗಿರಿನಗರ ದಲ್ಲಿರುವ ಒಕ್ಕಲಿಗ ಸಮುದಾಯದ ನೌಕರರ ಒಕ್ಕೂಟದ ವತಿಯಿಂದ ನಡೆದ ಕಾಯಕಯೋಗಿ ಪ್ರಶಸ್ತಿಯನ್ನು ಆದಿಚುಂಚನಗಿರಿಯ ವಿಜಯನಗರ ಶಾಖಾ ಮಠಾಧೀಶರಾದ ಶ್ರೀ ಸೋಮನಾಥ ಮಹಾಸ್ವಾಮೀಜಿ ಪ್ರದಾನ ಮಾಡಿದರು.

ಈ ಸಂದರ್ಭ ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಕೃಷ್ಣಪ್ಪ, ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶಗೌಡ, ವಿಧಾನ ಪರಿಷತ್ ಸದಸ್ಯ ಡಾ. ಗೋವಿಂದರಾಜ್, ಎಐಟಿಯುಸಿ ರಾಜ್ಯಾಧ್ಯಕ್ಷ ಅನಂತ ಸುಬ್ಬರಾವ್, ನಿವೃತ್ತ ಐಎಎಸ್ ಅಧಿಕಾರಿಗಳು ಟಿ. ತಿಮ್ಮೇಗೌಡ, ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ. ಅಂಜನಪ್ಪ ಮೊದಲಾದವರಿದ್ದರು.