ಕೂಡಿಗೆ, ಜ. ೧೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರ ವತಿಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೂಡಿಗೆ ವಲಯದ ಸಾಧನ ಸಮಾವೇಶ ಕಾರ್ಯಕ್ರಮವು ತಾ. ೧೩ ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಇಲ್ಲಿನ ದೊಡ್ಡಮ್ಮ ತಾಯಿ ದೇವಾಲಯದ ಆವರಣದಲ್ಲಿ ನಡೆಯಿಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡ್ಲೂರು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಕೆ.ಹೆಚ್. ಗಿರೀಶ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.