ಕೂಡಿಗೆ, ಜ. ೧೨: ಇಲ್ಲಿಗೆ ಸಮೀಪದ ಬಸವನಹಳ್ಳಿ ಗ್ರಾಮದ ವೃತ್ತದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಹೇರೂರು ಗ್ರಾಮದ ವಿನಯ್ ಬಂಧಿತ ವ್ಯಕ್ತಿ. ಈತನಿಂದ ರೂ. ೪,೫೦೦ ಮೌಲ್ಯದ ೪೦ ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಮಾರಾಟ ಬಗ್ಗೆ ಖಚಿತವಾದ ಮಾಹಿತಿ ದೊರೆತ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ದಾಳಿ ನಡೆಸಿ ಮಾಲು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಚಂದ್ರಶೇಖರ್, ಪೊಲೀಸ್ ಪೇದೆಗಳಾದ ಪ್ರಿಯಾಕುಮಾರ್, ಸಫೀನ್, ದಿನೇಶ್, ನಾಗರಾಜ್, ಪ್ರಕಾಶ್, ಯೋಗೇಶ್ ಇದ್ದರು.