ಮಡಿಕೇರಿ, ಜ. ೧೩: ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಗ್ರಾಮೀಣ ಭಾಗದ ಜನರು ಮತ್ತು ಮಹಿಳೆಯರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವೀರಾಜಪೇಟೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ ಅವರು ಕರೆ ನೀಡಿದ್ದಾರೆ.

ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವೀರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರುಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರಿಗೆ ನರೇಗಾ ಯೋಜನೆಯಲ್ಲಿ ಹಲವಾರು ಸೌಲಭ್ಯಗಳಿದ್ದು, ಅದರ ಸದುಪಯೋಗವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಸ್ವ್ವಾವಲಂಬಿ ಬದುಕು ನಡೆಸಲು ನರೇಗಾ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಸತೀಶ್ ಮಾತನಾಡಿ, ರಾಷ್ಟçಪಿತ ಮಹಾತ್ಮಗಾಂಧಿ ಅವರ ಆಶಯದಂತೆ ಹಸಿವು ಮುಕ್ತ ಭಾರತವಾಗಬೇಕು. ಈ ನಿಟ್ಟಿನಲ್ಲಿ ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರಿಗೆ ಕನಿಷ್ಟ ಆರ್ಥಿಕ ವರ್ಷದಲ್ಲಿ ೧೦೦ ದಿನಗಳ ಕೂಲಿ ನೀಡುತ್ತಿದ್ದು, ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ಇದ್ದು, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ನೀಡುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ ವೈಯಕ್ತಿಕ ಸೌಲಭ್ಯಗಳಾದ ದನದ ಕೊಟ್ಟಿಗೆ, ಕುರಿಶೇಡ್, ಆಡು ಕೊಟ್ಟಿಗೆ, ಹಂದಿಗೂಡು ಹೀಗೆ ಆರ್ಥಿಕ ಸ್ವಾವಲಂಬಿ ಬದುಕಿಗೆ ನರೇಗಾ ವರದಾನವಾಗಿದೆ ಎಂದು ತಿಳಿಸಿದರು.

ಕೃಷಿ ಇಲಾಖೆಯ ಅಧಿಕಾರಿ ರೀನಾ ಮಾತನಾಡಿ, ನರೇಗಾ ಯೋಜನೆಯಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೃಷಿಹೊಂಡ, ಎರೆಹುಳು ಘಟಕ, ರೈತರ ಜಮೀನುಗಳಲ್ಲಿ ಮಳೆ ನೀರಿನ ಸಂಗ್ರಹಣೆಗಾಗಿ ಬದುಗಳ ನಿರ್ಮಾಣವಾಗಿದ್ದು ರೈತರಿಗೆ ನರೇಗಾ ಯೋಜನೆಯು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ನೆರವಾಗಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆಯ ಅಧಿಕಾರಿ ರಮೇಶ್, ಸ್ವಚ್ಛ ಭಾರತ್ ಮಿಷನ್ ಸಂಯೋಜಕ ಸೂರಜ್ ಮಾತನಾಡಿದರು.

ನರೇಗಾ ತಾಲೂಕು ಐ.ಇ.ಸಿ. ಸಂಯೋಜಕ ನರೇಂದ್ರ ಅವರು ನರೇಗಾ ಯೋಜನೆಯ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ತಾ.ಪಂ. ವ್ಯವಸ್ಥಾಪಕ ರಾದ ಸ್ವರೂಪ, ಯಶೋಧ, ತಾಂತ್ರಿಕ ಸಂಯೋಜರಾದ ನಿರಂಜನ್, ತಾಂತ್ರಿಕ ಸಹಾಯಕ ಅಭಿಯಂತರರಾದ ವಿವೇಕ್, ಎನ್‌ಆರ್‌ಎಲ್‌ಎಂ ಯೋಗೇಶ್, ಮಹಿಳಾ ಸ್ವ ಸಹಾಯ ಸಂಘದ ಮಹಿಳೆಯರು ಹಾಗೂ ಇತರರು ಉಪಸ್ಥಿತರಿದ್ದರು.