ಚೆಟ್ಟಳ್ಳಿ, ಜ. ೧೨: ಚೆಟ್ಟಳ್ಳಿ ಸಹಕಾರ ಸಂಘದ ಈರಳೆ ಶಾಖೆಯಲ್ಲಿ ಪ್ರತಿಷ್ಠಾಪಿಸಲಿರುವ ಶ್ರೀ ಪಂಚಮುಖಿ ವಾಯುಪುತ್ರ ಮೂರ್ತಿಯನ್ನು ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪನವರ ನೇತೃತ್ವದಲ್ಲಿ ಮಹಿಳೆಯರ ಪೂರ್ಣಕುಂಭ ಸ್ವಾಗತದೊಂದಿಗೆ ಈಡುಗಾಯಿ ಹೊಡೆಯುವ ಮೂಲಕ ಸ್ವಾಗತಿಸಲಾಯಿತು.
ಉದ್ಯಮಿ ಎಸ್.ಜಿ. ಶ್ರೀನಿವಾಸ್ ಮೂರ್ತಿಗೆ ಹೂವಿನ ಹಾರವನ್ನು ಅರ್ಪಿಸಿ ಬಲ್ಲಾರಂಡ ಮಣಿ ಉತ್ತಪ್ಪ ಆರತಿ ಬೆಳಗಿದರು. ಚೆಟ್ಟಳ್ಳಿ ಶ್ರೀ ನರೇಂದ್ರ ಮೋದಿ ರೈತ ಸಹಕಾರ ಭವನದಿಂದ ಸಹಕಾರ ಸಂಘದ ಮುಖ್ಯ ಕಚೇರಿಯವರೆಗೆ ಪಟ್ಟಣದ ಉದ್ದಕ್ಕೂ ಮೆರವಣಿಗೆ ಸಾಗಿ ಕಾವೇರಿ ಮಾತೆಗೆ, ಪಶುಪತಿನಾಥನಿಗೆ ಆರತಿ ಬೆಳಗಿ ಈರಳೆ ಶಾಖೆಯಲ್ಲಿ ಪ್ರತಿಷ್ಠಾಪನೆಗೆ ಮೂರ್ತಿಯನ್ನು ಕೊಂಡೊಯ್ಯಲಾಯಿತು.
ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ೭ ಅಡಿ ಎತ್ತರದ ಶ್ರೀ ಪಂಚಮುಖಿ ವಾಯುಪುತ್ರ ಮೂರ್ತಿಯನ್ನು ಪ್ರತಿಷ್ಠಾಪಿಸುತಿದ್ದೇವೆ. ಸಂಕ್ರಾAತಿ ದಿನವಾದ ತಾ. ೧೫ ರಂದು ವಿವಿಧ ಪೂಜಾ ಕೈಂಕರ್ಯದೊAದಿಗೆ ಸಂಘದ ಈರಳೆ ಶಾಖೆಯ ಆವರಣದಲ್ಲಿ ಅನಾವರಣಗೊಳ್ಳಲಿದೆ ಎಂದು ಬಲ್ಲಾರಂಡ ಮಣಿ ಉತ್ತಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ವೀರಾಂಜನೆಯ ಯುವಕ ಸಂಘದ ಅಧ್ಯಕ್ಷ ಬಲ್ಲಾರಂಡ ಕಂಠಿ ಕಾರ್ಯಪ್ಪ, ಗೌರಿ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷ ಪುತ್ತರಿರ ಶಿವು ನಂಜಪ್ಪ, ಕಾರ್ಕಳದ ಶಿಲ್ಪಿ ಗುಣವಂತೇಶ್ವರಭಟ್, ಚೆಟ್ಟಳ್ಳಿ ಸಹಕಾರ ಸಂಘದ ಉಪಾಧ್ಯಕ್ಷ ಕಣಜಾಲು ಪೂವಯ್ಯ, ನಿರ್ದೇಶಕರುಗಳಾದ ಪುತ್ತರಿರ ಎಂ. ಸೀತಮ್ಮ, ಅಡಿಕೇರ ಜಯಾ, ಕಾಶಿ, ಧನಂಜಯ ಹಾಗೂ ಸಂಘದ ಸದಸ್ಯರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ, ಆಂತರಿಕ ಲೆಕ್ಕ ಪರಿಶೋಧಕ ಹೆಚ್.ಬಿ. ರಮೇಶ್, ಸಹಕಾರ ಸಂಘದ ಸಿಬ್ಬಂದಿಗಳು ಸ್ಥಳೀಯ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.