ಪೊನ್ನAಪೇಟೆ: ಬೌದ್ಧಿಕ ಶಕ್ತಿ, ದೈಹಿಕ ಶಕ್ತಿ, ಮಾನಸಿಕ ಶಕ್ತಿಯನ್ನು ಯುವಜನರು ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕಾಗಿದೆ. ಸ್ವಾಮಿ ವಿವೇಕಾನಂದರು ಈ ಮೂರು ಗುಣಗಳನ್ನು ಹೊಂದಿರುವ ಸದೃಢ ಯುವಜನರನ್ನು ದೇಶ ನಿರ್ಮಾಣಕ್ಕೆ ಅವಶ್ಯ ಎಂದು ತಿಳಿಸಿದ್ದರು ಎಂದು ವಾಗ್ಮಿ ಹಾಗೂ ಯುವ ಬ್ರಿಗೇಡಿನ ಸಂಚಾಲಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ವತಿಯಿಂದ ಪೊನ್ನಂಪೇಟೆ ರಾಮಕೃಷ್ಣ ಶಾರದಾ ಶ್ರಮ ಸಭಾಂಗಣದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಯುವಕರಲ್ಲಿ ದೈಹಿಕ ಶಕ್ತಿಯು ಇಲ್ಲ, ಬೌದ್ಧಿಕ ಶಕ್ತಿಯು ಇಲ್ಲ, ಮಾನಸಿಕ ಶಕ್ತಿಯೂ ಕಡಿಮೆಯಾಗಿದೆ. ಆದ್ದರಿಂದ ಯುವಜನರು ಧ್ಯಾನ, ಯೋಗ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಯುವ ಜನತೆಗೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪೊನ್ನಂಪೇಟೆ ಶಾರದಾಶ್ರಮದ ಅಧ್ಯಕ್ಷ ತತ್ವ ರೂಪಾನಂದಾಜಿ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶ ಮತ್ತು ತತ್ವಗಳು ಸಾರ್ವಕಾಲಿಕ ವಾಗಿದ್ದು ಯುವ ಜನತೆ ಅವುಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಅರಣ್ಯ ಮಹಾವಿದ್ಯಾಲಯದ ಡೀನ್ ಡಾ. ಸಿ.ಜಿ. ಕುಶಾಲಪ್ಪ, ಹಳ್ಳಿಗಟ್ಟು ಸಿಐಟಿ ಕಾಲೇಜು ಪ್ರಾಂಶುಪಾಲ ಡಾ. ಬಸವರಾಜು ಇನ್ನಿತರರು ಇದ್ದರು.

ವಿವೇಕಾನಂದರ ಭಾವಚಿತ್ರ ಮೆರವಣಿಗೆ

ಸಭಾ ಕಾರ್ಯಕ್ರಮಕ್ಕೂ ಮುನ್ನಾ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಿಂದ ರಾಮಕೃಷ್ಣ ಶಾರದಾಶ್ರಮದವರೆಗೆ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಹೊತ್ತ ರಥದ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು.

ಮೆರವಣಿಗೆಗೆ ಕುಟ್ಟ ವೃತ್ತ ನಿರೀಕ್ಷಕ ಮಂಜಪ್ಪ, ಪೊನ್ನಂಪೇಟೆ ಠಾಣಾಧಿಕಾರಿ ಸುಬ್ರಮಣಿ ಚಾಲನೆ ನೀಡಿದರು. ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ತತ್ವ ರೂಪಾನಂದ ಸ್ವಾಮೀಜಿ, ಡಾ. ಶಿವಪ್ಪ ವಿವಿಧ ಶಾಲೆಯ ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರು, ಶಿಕ್ಷಕರು, ಈ ಭಾಗದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ-ಸAಸ್ಥೆ ಪದಾಧಿಕಾರಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕಾವೇರಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಎಂ.ಎನ್. ವನೀತ್ ಕುಮಾರ್ ಮತ್ತು ಎನ್.ಪಿ. ರೀತಾ ಅವರ ಮಾರ್ಗ ದರ್ಶನದಲ್ಲಿ ಕಾವೇರಿ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳು ನೆರೆದಿದ್ದ ಜನರಿಗೆ ಊಟ ಬಡಿಸುವ ಮೂಲಕ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.