ವೀರಾಜಪೇಟೆ, ಜ. ೧೨: ಇಂದಿನ ಯುವ ಜನಾಂಗ ಉತ್ತಮವಾದ ದಾರಿಯಲ್ಲಿ ನಡೆದರೆ ಮಾತ್ರವೇ, ಭವಿಷ್ಯದ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಎನ್.ಎಸ್.ಎಸ್ ಘಟಕ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕೊಡಗು, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಯುವ ಒಕ್ಕೂಟ ಕೊಡಗು, ಮೂರು ತಾಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟಿçÃಯ ಯುವ ದಿನ ಹಾಗೂ ಯುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರೊಂದಿಗೆ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರ ಆದರ್ಶ ಜೀವನ ಮನುಕುಲಕ್ಕೆ ಸದಾ ಮಾರ್ಗದರ್ಶಿ. ಎಲ್ಲರಿಗೂ ಸ್ಫೂರ್ತಿ, ದಾರಿ ದೀಪ. ಇವರ ಬದುಕಿನ ಮೌಲ್ಯ, ಸಂದೇಶಗಳು ಇಂದಿಗೂ ಪ್ರಸ್ತುತ, ಜಗತ್ತಿಗೆ ಜ್ಞಾನದ ಬೆಳಕನ್ನು ಹರಿಸಿದ ಗುರುಗಳು ವಿವೇಕಾನಂದರು ಎಂದರಲ್ಲದೆ, ನಮ್ಮ ದೇಶ ಕಂಡ ಅಪ್ರತಿಮ ಅಧ್ಯಾತ್ಮಿಕ ನಾಯಕ, ವೀರ ಸನ್ಯಾಸಿಯ ಮಾತುಗಳು ಇಂದಿಗೂ ಪ್ರಸ್ತುತ. ವೇದಾಂತ ಮತ್ತು ಯೋಗದ ಭಾರತೀಯ ತತ್ತ÷್ವ ಚಿಂತನೆಗಳನ್ನು ವಿಶ್ವ ಭೂಪಟದಲ್ಲಿ ರಾರಾಜಿಸುವಂತೆ ಮಾಡಿದವರಲ್ಲಿ ವಿವೇಕಾನಂದರು ಕೂಡಾ ಪ್ರಮುಖರಲ್ಲಿ ಒಬ್ಬರು. ತಮ್ಮ ಪ್ರಖರ ಭಾಷಣಗಳು ಮತ್ತು ಉಪನ್ಯಾಸಗಳ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸಲು ವಿವೇಕಾನಂದರು ಪ್ರಯತ್ನಿಸಿದರು. ಅಂತೆಯೇ, ವಿವೇಕಾನಂದರ ಜನ್ಮದಿನವನ್ನು ಪ್ರತಿವರ್ಷ ರಾಷ್ಟಿçÃಯ ಯುವ ದಿನವಾಗಿ ಆಚರಿಸಲಾಗುತ್ತಿದೆ. ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಮಾತನಾಡಿ ಯುವ ಜನಾಂಗವು ವಿದ್ಯಾರ್ಥಿ ಜೀವನದಲ್ಲಿ ಯಾವುದೇ ರೀತಿಯ ಆಸೆ, ಆಮಿಷಗಳು, ಮಾದಕ ಚಟಗಳಿಗೆ ಒಳಗಾಗದೇ ಶಿಸ್ತುಬದ್ಧ ಹಾಗೂ ಸಂಯಮದ ಜೀವನವನ್ನು ನಡೆಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಯುವ ಪೀಳಿಗೆ ಸಂಸ್ಕೃತಿಯನ್ನು ಕೊಂಡೊಯ್ಯುವAತಾಗಬೇಕು. ಯುವಶಕ್ತಿ ಸಮಾಜದಲ್ಲಿ ಓರ್ವ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು. ಸಮಾಜಕ್ಕೆ ಹೊಂದಿಕೊAಡಾಗ ಮಾತ್ರ ನಮಗೆ ಜ್ಞಾನೋದಯ ಬದುಕಿನಲ್ಲಿ ಅರಿವು ಮೂಡುತ್ತದೆ ಎಂದರು. ಯುವ ಶಕ್ತಿ ಕ್ಷಣಿಕ ಬದುಕಿಗಾಗಿ, ಬದುಕನ್ನು ಹಾಳುಗೆಡವಬಾರದು. ನಾವು ಯಾರೂ ಎಂಬುದನ್ನು ಸಮಾಜಕ್ಕೆ ತೋರ್ಪಡಿಸುವಂತಾಗಬೇಕೆAದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಕುಶಾಲನಗರ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಶಶಿಧರ್ ಬಿ.ಆರ್. ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ, ಆದರ್ಶಗಳು, ಭಾರತೀಯ ತತ್ವಶಾಸ್ಸ÷್ತç ಮತ್ತು ಸಂಸ್ಕöÈತಿಯ ಪುನರುತ್ಥಾನಕ್ಕೆ ವಿವೇಕಾನಂದರ ಕೊಡುಗೆಗಳ ಕುರಿತಂತೆ ಸವಿಸ್ತಾರವಾಗಿ ವಿವರಿಸಿದರು.

ಕಾಲೇಜಿನ ಪಾಂಶುಪಾಲ ಡಾ. ದಯಾನಂದ ಕೆ.ಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ವೀರಾಜಪೇಟೆ ತಾಲೂಕು ದಂಡಾಧಿಕಾರಿ ಅರ್ಚನಾ ಭಟ್, ಪೊನ್ನಂಪೇಟೆ ತಾಲೂಕು ದಂಡಾಧಿಕಾರಿ ಪ್ರಶಾಂತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ ವಿ.ಟಿ., ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ, ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ದಿವ್ಯ ಎಂ.ಬಿ., ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಜಿಲ್ಲಾ ಯುವ ಒಕ್ಕೂಟದ ಖಜಾಂಚಿ ಹಾಗೂ ರಾಜ್ಯ ಯುವ ಪ್ರಶಸ್ತಿ ವಿಜೇತ ಕುಂಜಿಲನ ಮಧು ಮೋಹನ್, ತಾಲೂಕು ಒಕ್ಕೂಟ ಕಾರ್ಯದರ್ಶಿ ನೇತ್ರಾವತಿ, ತಾಳತ್ತ್ಮನೆ ಯುವಕ ಸಂಘದ ಸದಸ್ಯ ವಿಘ್ನೇಶ್ವರ್ ಉಪಸ್ಥಿತರಿದ್ದರು.

ವೀರಾಜಪೇಟೆ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ಕಾವ್ಯಶ್ರೀ ತಂಡದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮ ಮನಸೂರೆಗೊಂಡಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಸಲಹೆಗಾರರಾದ ಎನ್.ಎಸ್. ಕಂದಾ ದೇವಯ್ಯ ಸ್ವಾಗತಿಸಿ, ಕು. ದಿವ್ಯ ಎಂ,ಬಿ. ವಂದಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷ ಕೂಡಂಡ ಸಾಬ ಸುಬ್ರಮಣಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.