ಕುಶಾಲನಗರ, ಜ. ೧೩: ಕುಶಾಲನಗರದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ೧೦೭ ಜನರಿಗೆ ಹಕ್ಕುಪತ್ರ ವಿತರಣೆ ಮಾಡಿದರು. ಕುಶಾಲನಗರ ಪ್ರವಾಸಿ ಮಂದಿರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದ ರಂಜನ್ ಅವರು ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳಬಾರದು, ಆರ್ಥಿಕವಾಗಿ ಬೆಳವಣಿಗೆ ಹೊಂದುವ ಪ್ರಯತ್ನ ಮಾಡಬೇಕು ಎಂದರು. ಈ ಸಂದರ್ಭ ತಾಲೂಕು ತಹಶೀಲ್ದಾರ್ ಪ್ರಕಾಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಕುಡ ಅಧ್ಯಕ್ಷ ಎಂ.ಎA. ಚರಣ್ ಇದ್ದರು.