ಸೋಮವಾರಪೇಟೆ: ಸ್ವಾಮಿ ವಿವೇಕಾನಂದ ಜಯಂತೋತ್ಸವ ಸಮಿತಿ ವತಿಯಿಂದ ಪಟ್ಟಣದಲ್ಲಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.

ಇಲ್ಲಿನ ವಿವೇಕಾನಂದ ವೃತ್ತದಲ್ಲಿರುವ ಪ್ರತಿಮೆಗೆ ಸಮಿತಿಯ ಗೌರವಾಧ್ಯಕ್ಷರಾಗಿರುವ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮಾಲಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, ವಿವೇಕಾನಂದರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಯುವ ಜನಾಂಗ ಅವರ ಮಾರ್ಗದರ್ಶನದಲ್ಲಿ ಸಾಗಬೇಕು ಎಂದರು.

ಈ ಸಂದರ್ಭ ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಬಿ.ಆರ್. ಮೃತ್ಯುಂಜಯ, ರೋಟರಿ ಸಂಸ್ಥೆಯ ಹೆಚ್.ಸಿ. ನಾಗೇಶ್, ಬಿ.ಎಸ್. ಸುಂದರ್, ಎಲ್‌ಐಸಿ ನಾಗೇಶ್, ಜೇಸೀ ಸಂಸ್ಥೆಯ ಅಧ್ಯಕ್ಷೆ ಎಂ.ಎ. ರುಬೀನಾ, ಜಾಣಪದ ಪರಿಷತ್ ಅಧ್ಯಕ್ಷ ಕೆ.ಎಸ್. ಪ್ರಕಾಶ್, ಅಬ್ಬೂರುಕಟ್ಟೆ ರವಿಕುಮಾರ್, ಜ್ಞಾನವಿಕಾಸ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಉಪಸ್ಥಿತರಿದ್ದರು.