ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಸೇರಿ ನಾಲ್ವರ ಸೆರೆ
ಮೈಸೂರು, ಜ. ೧೩: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅನೈತಿಕ ದಂಧೆ ಮತ್ತು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತಿನ ಅಹಮದಾ ಬಾದ್ನಲ್ಲಿ ಬಂಧಿಸುವಲ್ಲಿ ರಾಜ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತು ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಕಳೆದ ೧೧ ದಿನಗಳಿಂದ ರಾಜ್ಯ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ರಾಮ್ ಜಿ, ಸತೀಶ್, ಮಧುಸೂದನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿಸಿದರು. ನಿನ್ನೆ ದಿನ ಮಂತ್ರಾಲಯದಲ್ಲಿ ಸ್ಯಾಂಟ್ರೋ ರವಿ ಆಪ್ತನನ್ನು ಬಂಧಿಸಲಾಗಿತ್ತು. ನಂತರ ದೊರೆತ ಖಚಿತ ಮಾಹಿತಿ ಮೇರೆಗೆ ಗುಜರಾತ್ಗೆ ತೆರಳಿದ ವಿಶೇಷ ತಂಡದಿAದ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ಟ್ರಾನ್ಸಿಟ್ ವಾರೆಂಟ್ ಪಡೆದು ಮೈಸೂರಿಗೆ ಕರೆತರುತ್ತೇವೆ ಎಂದರು. ಜನವರಿ ೧ ರಂದು ಮೈಸೂರಿನಲ್ಲಿ ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ, ರಾಜ್ಯದ ಹಲವೆಡೆ ಕಾರಿನಲ್ಲಿ ಸುತ್ತಾಡಿದ್ದ, ನಂತರ ಗುಜರಾತ್ಗೆ ತೆರಳಿ ವೇಷ ಬದಲಿಸಿಕೊಂಡಿದ್ದ. ನಿತ್ಯ ಜಾಗ ಹಾಗೂ ಮೊಬೈಲ್ ಸೀಮ್ ಬದಲಾಯಿಸುತ್ತಿದ್ದರಿಂದ ಆತನ ಬಂಧನ ವಿಳಂಬವಾಗಿತ್ತು. ಆತನ ಬಂಧನಕ್ಕಾಗಿ ಮಂಡ್ಯ, ಮೈಸೂರು, ರಾಮನಗರ ಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಗುಜರಾತ್ ಪೊಲೀಸರ ನೆರವಿನಿಂದ ಇಂದು ಮಧ್ಯಾಹ್ನ ಆರೋಪಿಯನ್ನು ಬಂಧಿಸಿದೆ ಎಂದು ಎಡಿಜಿಪಿ ವಿವರಿಸಿದರು.
ವಾರಣಾಸಿಯಲ್ಲಿ ಟೆಂಟ್ ಸಿಟಿ ಉದ್ಘಾಟಿಸಿದ ಪ್ರಧಾನಿ ಮೋದಿ
ವಾರಣಾಸಿ, ಜ. ೧೩: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಾರಣಾಸಿಯಲ್ಲಿ ಟೆಂಟ್ ಸಿಟಿಯನ್ನು ಉದ್ಘಾಟಿಸಿದರು. ೧,೦೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ಒಳನಾಡು ಜಲಮಾರ್ಗ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪವಿತ್ರ ನಗರದ ಪ್ರಸಿದ್ಧ ಘಾಟ್ಗಳ ಎದುರು ಗಂಗಾನದಿಯ ದಡದಲ್ಲಿ ಅಭಿವೃದ್ಧಿಪಡಿಸಲಾದ ಈ ಟೆಂಟ್ ಸಿಟಿಯು ಈ ಪ್ರದೇಶದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ನೀಡಲಿದೆ. ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಟೆಂಟ್ ಸಿಟಿ ಪ್ರವಾಸಿಗರಿಗೆ ಲೈವ್ ಶಾಸ್ತಿçÃಯ ಸಂಗೀತ ಮತ್ತು ಯೋಗ ತರಬೇತಿಯ ಜೊತೆಗೆ ವಸತಿ ಸೌಕರ್ಯಗಳನ್ನು ಒದಗಿಸುತ್ತದೆ. ಪ್ರವಾಸಿಗರು ವಾರಣಾಸಿಯ ವಿವಿಧ ಘಾಟ್ಗಳಿಂದ ದೋಣಿಗಳ ಮೂಲಕ ಈ ಟೆಂಟ್ ಸಿಟಿಯನ್ನು ತಲುಪ ಬಹುದು. ಇದು ಅಕ್ಟೋಬರ್ನಿಂದ ಜೂನ್ವರೆಗೆ ಕಾರ್ಯನಿರ್ವಹಿಸಲಿದ್ದು, ಮಳೆಗಾಲದಲ್ಲಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗುವುದರಿಂದ ಮೂರು ತಿಂಗಳ ಕಾಲ ಟೆಂಟ್ ಸಿಟಿ ಬಂದ್ ಮಾಡಲಾಗುತ್ತದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಬಂದರು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲು
ಬೆಂಗಳೂರು, ಜ. ೧೩: ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬAಧಿಸಿದAತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೊ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಈಚೆಗೆ ಕುಸಿದು ಬಿದ್ದು ತಾಯಿ ಮತ್ತು ಗಂಡು ಮಗು ಸಾವನ್ನಪ್ಪಿದ ಪ್ರಕರಣ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಗುಂಡಿ ಬಿದ್ದಿರುವ ವಿಚಾರದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದAತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಅಶೋಕ ಎಸ್. ಕಿಣಗಿ ಅವರಿದ್ದ ನ್ಯಾಪೀಠ, ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಪ್ರಸ್ತಾಪಿಸಿತು. ಅಲ್ಲದೇ ಈ ರೀತಿಯ ಘಟನೆ ದುರದೃಷ್ಟಕರ ಎಂದು ತಿಳಿಸಿತು. ಬೆಂಗಳೂರಿನಲ್ಲಿ ಜನವರಿ ೧೧ ಮತ್ತು ೧೩ ರಂದು ಪ್ರತ್ಯೇಕವಾಗಿ ನಡೆದಿರುವ ಪ್ರಕರಣಗಳು ಸಂಜ್ಞೇಯ ಪರಿಗಣಿಸುವಂತೆ ಮಾಡಿವೆ ಎಂದು ವಿಭಾಗೀಯ ಪೀಠವು ಆದೇಶದಲ್ಲಿ ಹೇಳಿದೆ.
ರಜೌರಿ ಉಗ್ರರ ದಾಳಿ ಕುರಿತು ಎನ್ಐಎ ತನಿಖೆ: ಅಮಿತ್ ಶಾ
ಶ್ರೀನಗರ, ಜ. ೧೩: ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅಮಿತ್ ಶಾ, ಕಳೆದ ಒಂದೂವರೆ ವರ್ಷಗಳಲ್ಲಿ ಜಮ್ಮುವಿನಲ್ಲಿ ನಡೆದ ಎಲ್ಲಾ ಭಯೋತ್ಪಾದಕ ಘಟನೆಗಳನ್ನು ಸಹ ಎನ್ಐಎ ತನಿಖೆ ನಡೆಸಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತನಿಖೆಯಲ್ಲಿ ಸಕ್ರಿಯವಾಗಿ ಸಹಾಯ ಮಾಡಲಿದ್ದಾರೆ ಎಂದರು. ಜನವರಿ ೧ ಮತ್ತು ೨ ರಂದು ರಜೌರಿಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದರೆ ೧೪ ಜನರು ಗಾಯಗೊಂಡಿದ್ದರು. ಜಮ್ಮು ಮತ್ತು ಕಾಶ್ಮೀರದ ಭದ್ರತಾ ಏಜೆನ್ಸಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಭದ್ರತಾ ಪರಿಶೀಲನಾ ಸಭೆ ನಡೆಸಿದ ಶಾ, ಭದ್ರತೆಯನ್ನು ಇನ್ನಷ್ಟು ಬಲಪಡಿಸುವುದು ಹೇಗೆ ಎಂದು ನಾವು ಚರ್ಚಿಸಿದ್ದೇವೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಮತ್ತು ಭವಿಷ್ಯದಲ್ಲಿ ಅಂತಹ ಘಟನೆ ತಡೆಯಲು ಸಜ್ಜಾಗಿರುವುದಾಗಿ ಭದ್ರತಾ ಏಜೆನ್ಸಿಗಳು ತಿಳಿಸಿವೆ ಎಂದರು.
ಸಿಎA ನಿವಾಸದ ಎದುರು ಪಂಚಮಸಾಲಿಗರ ಪ್ರತಿಭಟನೆ
ಹಾವೇರಿ, ಜ. ೧೩: ಮೀಸಲಾತಿಯಲ್ಲಿ ಸ್ಪಷ್ಟತೆಯ ಕೊರತೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಎದುರು ಪಂಚಮಸಾಲಿ ಸಮುದಾಯದವರು ಇಂದು ಪ್ರತಿಭಟನೆ ನಡೆಸಿದರು. ಪಂಚಮಸಾಲಿ ಲಿಂಗಾಯಿತ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಮುದಾಯದ ನೂರಾರು ಮಂದಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಜಯ ಮೃತ್ಯುಂಜಯ ಸ್ವಾಮೀಜಿ, ಡಿಸೆಂಬರ್ ೨೯ ರಂದು ತಮ್ಮ ಸಮುದಾಯಕ್ಕೆ ೨ ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಾಯಿ ಮೇಲೆ ಆಣೆ ಮಾಡಿದ್ದರು. ನಾವು ೨ ಎ ಮೀಸಲಾತಿ ಕೇಳಿದೇವು. ಆದರೆ, ಅವರು ೨ ಡಿ ನೀಡಿದ್ದಾರೆ. ಸಿಎಂ ಅವರ ತಾಯಿ ಮೇಲೆ ಆಣೆ ಮಾಡಿ ತಪ್ಪು ಮಾಡಿದ್ದಾರೆ. ಆದ್ದರಿಂದ ಅವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ನಡೆಸುತ್ತಿರುವುದಾಗಿ ತಿಳಿಸಿದರು.
ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯ ಶವ ಪತ್ತೆ!
ಭುವನೇಶ್ವರ, ಜ. ೧೩: ಉದಯೋನ್ಮುಖ ಕ್ರಿಕೆಟ್ ಆಟಗಾರ್ತಿಯೊಬ್ಬರ ಶವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಒಡಿಶಾದಲ್ಲಿ ಪತ್ತೆಯಾಗಿದೆ. ಒಡಿಶಾದ ಮಹಿಳಾ ಕ್ರಿಕೆಟ್ ಆಟರ್ಗಾತಿ ರಾಜಶ್ರೀ ಸ್ವೈನಿ ಅವರ ಶವ ಕಟಕ್ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದು, ಕಳೆದ ಮೂರು ದಿನಗಳಿಂದ ಅಂದರೆ ತಾ. ೧೧ ರಿಂದ ರಾಜಶ್ರೀ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಕಟಕ್ನ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಅವರು ಅಥಘರ್ ಪ್ರದೇಶದ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾಜಶ್ರೀ ಅವರ ತರಬೇತುದಾರರು ಗುರುವಾರ ಕಟಕ್ನ ಮಂಗಳಬಾಗ್ ಪೊಲೀಸ್ ಠಾಣೆಯಲ್ಲಿ ರಾಜಶ್ರೀ ಅವರು ನಾಪತ್ತೆ ಆಗಿದ್ದಾರೆ ಎಂದು ದೂರು ನೀಡಿದ್ದರು. ಈ ಸಂಬAಧ ತನಿಖೆ ನಡೆಸಿದ ಪೊಲೀಸರಿಗೆ ಆಟಗಾರ್ತಿಯ ಶವ ಪತ್ತೆಯಾಗಿದೆ. ಗುರ್ಡಿ ಜಾಟಿಯಾ ಪೊಲೀಸ್ ಠಾಣೆಯಲ್ಲಿ ರಾಜಶ್ರೀ ಅವರ ಸಾವಿನ ಕುರಿತು ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದ್ದು, ಅವರ ಸಾವಿಗೆ ಕಾರಣವೇನು ಎಂಬುದನ್ನು ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಆದರೆ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.