ಗೋಣಿಕೊಪ್ಪ, ಜ. ೧೩: ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕ ಕೆ. ಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳಿಗೆ ಚಿತ್ರಕಲೆ, ಕ್ರೀಡೆ, ಸಾಹಿತ್ಯದ ಬಗ್ಗೆ ಆಸಕ್ತಿ ಮೂಡಿಸಲು ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದೈಹಿಕ ಶಿಕ್ಷಕÀ ಟಿ.ಡಿ. ರಮಾನಂದ, ಶಿಕ್ಷಕಿಯರಾದ ಕೆ.ಕೆ. ಸರಸ್ವತಿ, ಬಿ. ನಿರ್ಮಲಾ, ಎಂ.ಸಿ. ಇಂದಿರಾ, ಚಿತ್ರಕಲಾ ಶಿಕ್ಚಕ ಬಿ.ಆರ್. ಸತೀಶ್, ಪತ್ರಕರ್ತ ಯುವರಾಜ್ ಕೃಷ್ಣ., ಉದ್ಯಮಿ ಮಿಥುನ್ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.