ಮಡಿಕೇರಿ, ಜ. ೧೪: ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಅವರು ನಡೆಸಿದರು.

ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತç ವಿಭಾಗದ ಸ್ನಾತಕೋತ್ತರ ಸಂಯೋಜಕಿ ಡಾ. ರೇಣುಶ್ರೀ ಹೆಚ್.ಕೆ., ಮಡಿಕೇರಿಯ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಪತ್ರಕರ್ತ ಚಂದನ್ ನಂದರಬೆಟ್ಟು ಹಾಜರಿದ್ದರು.

ಅತಿಥಿಗಳಾಗಿ ಮಡಿಕೇರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಕಿಯರ ಬಾಲಮಂದಿರದ ಮೇಲ್ವಿಚಾರಕಿ ನಾಗರತ್ನ, ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯ ಪಾಲಕರಾದ ಸಿಂಧು ಹಾಗೂ ಜ್ಯೋತಿ, ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಶಂಭು, ಕರಾಟೆ ತರಬೇತುಗಾರ್ತಿ ಶಾರದ ಹಾಜರಿದ್ದರು.

ಮುಖ್ಯ ಅತಿಥಿ ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು.

ಮತ್ತೋರ್ವ ಅತಿಥಿ ದಿವಾಕರ್ ಹೆಚ್.ಎಲ್. ಮಾತನಾಡಿ, ಕಳೆದ ೩೦ ವರ್ಷಗಳಿಂದ ಡಿಎಸ್‌ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ, ee ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಶಂಭು, ಕರಾಟೆ ತರಬೇತುಗಾರ್ತಿ ಶಾರದ ಹಾಜರಿದ್ದರು.

ಮುಖ್ಯ ಅತಿಥಿ ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು.

ಮತ್ತೋರ್ವ ಅತಿಥಿ ದಿವಾಕರ್ ಹೆಚ್.ಎಲ್. ಮಾತನಾಡಿ, ಕಳೆದ ೩೦ ವರ್ಷಗಳಿಂದ ಡಿಎಸ್‌ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ, ee ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಭಾಜನಾರಾಗಬೇಕು ಎಂದರು.

ಡಿಎಸ್‌ಎಸ್ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಶಿಕ್ಷಣದಲ್ಲಿರುವ ಹಂತಗಳು, ವಿವಿಧ ಕೋರ್ಸ್ಗಳ ಬಗ್ಗೆ ಹಾಗೂ ಡಿಎಸ್‌ಎಸ್ ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಮೊದಲ ಆದ್ಯತೆ ಎಂದರು.

ಅಧ್ಯಕ್ಷೀಯ ಭಾಷಣ ಮಾಡಿದ ಬಾಲಕೃಷ್ಣ ರೈ, ವಿದ್ಯಾರ್ಥಿನಿಯರು ತಮ್ಮ ಗುರಿಯನ್ನು ಮುಂದಿಟ್ಟುಕೊAಡು ಕಲಿಕೆ ಮುಂದುವರೆಸಬೇಕು, ಇಲಾಖೆಯಲ್ಲಿ ಬಹಳಷ್ಟು ಸೌಲಭ್ಯಗಳಿದ್ದು ಅದರ ನೆರವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಹಲವಾರು ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅವುಗಳ ಬಹುಮಾನಗಳನ್ನು ವಿತರಿಸಲಾಯಿತು. ನಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು.