ಮಡಿಕೇರಿ, ಜ. ೧೪: ನಾಡಿನೆಲ್ಲೆಡೆ ಮಕರ ಸಂಕ್ರಾAತಿಯನ್ನು ಭಕ್ತಿಭಾವ ದೊಂದಿಗೆ ಆಚರಿಸಲಾಯಿತು. ಶ್ರೀ ಅಯ್ಯಪ್ಪ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಸಂಕ್ರಾAತಿ ಮಹೋತ್ಸವ ನೆರವೇರಿತು. ಅಯ್ಯಪ್ಪ ದೇವರಿಗೆ ವಿಶೇಷ ಪೂಜೆ, ಅಭಿಷೇಕದೊಂದಿಗೆ ಕರ್ಪೂರ ಹಚ್ಚಿ ಪ್ರಾರ್ಥನೆ ಸಲ್ಲಿಸಲಾಯಿತು.

ಮಡಿಕೇರಿಯ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ ಹಾಗೂ ಇತರ ಧಾರ್ಮಿಕ ಕಾರ್ಯಗಳೊಂದಿಗೆ ಕುಟ್ಟಿಚಾತನ್ ದೇವರ ವೆಳ್ಳಾಟಂ, ಮುತ್ತಪ್ಪ ದೇವರ ವೆಳ್ಳಾಟಂ, ಗುಳಿಗ ದೇವರ ವೆಳ್ಳಾಟಂ, ಅಯ್ಯಪ್ಪ ದೇವರ ಅಲಂಕಾರ ಪೂಜೆ, ಅಯ್ಯಪ್ಪ ದೇವರ ಉತ್ಸವ ಮೂರ್ತಿಯ ಪ್ರದಕ್ಷಿಣೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಂಜೆ ಭಜನೆ, ಅಲಂಕಾರ ಪೂಜೆ, ಪಡಿಪೂಜೆ, ದೀಪಾರಾಧನೆ, ಪ್ರಸಾದ ವಿತರಣೆ ನೆರವೇರಿತು.ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಳ್ಳಿ ಗ್ರಾಮದಲ್ಲಿರುವ ಮಕರ ಸಂಕ್ರಾAತಿ ದಿನದಂದು ಶನೈಶ್ವರ ದೇವಾಲಯದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜೆ ನಡೆಯಿತು.

ಭಸ್ಮಾಭಿಷೇಕ, ಪಂಚಾಮೃತಾಭಿಷೇಕ, ಪಡಿಪೂಜೆ, ಮಹಾಪೂಜೆ, ಪ್ರಸಾದ ವಿನಿಯೋಗ ಸೇರಿದಂತೆ ಅಯ್ಯಪ್ಪ ಸ್ವಾಮಿ ಮೆರವಣಿಗೆಯೊಂದಿಗೆ ಉತ್ಸವ ಮೂರ್ತಿಗೆ ಹಾರಂಗಿ ನದಿಯಲ್ಲಿ ಶುದ್ಧ ಜಳಕಾಭಿಷೇಕ, ಪಾಲುಕೊಂಬು ಮೆರವಣಿಗೆ, ಅಯ್ಯಪ್ಪ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು.ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾAತಿ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು.

ದೇವಾಲಯದಲ್ಲಿ ಗಣಪತಿ ಹೋಮ, ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ, ಅನ್ನದಾನ, ಸಂಜೆ ಮಕರ ವಿಳಕ್ಕು ವಿಶೇಷ ಪೂಜೆ, ಭಜನೆ, ಮಹಾಮಂಗಳಾರತಿ ನಂತರ ರಾತ್ರಿ ಭಕ್ತಾದಿಗಳಿಗೆ ಅನ್ನದಾನ ನಡೆಯಿತು.