ನಾಪೋಕ್ಲು, ಜ. ೧೪: ಶಾಲಾ ದಿನಗಳಲ್ಲಿ ೮ ಗಂಟೆಗಳ ಕಾಲ ಮಾತ್ರ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಇರುತ್ತಾರೆ. ರಜೆ ಸೇರಿದಂತೆ ಮತ್ತಿತರ ಸಮಯಗಳಲ್ಲಿ ಮಕ್ಕಳು ಪೋಷಕರೊಂದಿಗೆ ಕಾಲ ಕಳೆಯುತ್ತಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಿಗಿಂತಲೂ ಪೋಷಕರ ಪಾತ್ರ ಮಹತ್ವದ್ದು ಎಂದು ‘ಶಕ್ತಿ’ ದಿನಪತ್ರಿಕೆಯ ಸಲಹಾ ಸಂಪಾದಕ, ಕೊಡಗು ಜಿಲ್ಲಾ ಜಾನಪದ ಪರಿಷತ್À ಅಧ್ಯಕ್ಷ ಬಿ.ಜಿ. ಅನಂತಶಯನ ಅಭಿಪ್ರಾಯಪಟ್ಟರು.
ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಸಮೀಪದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ನಾಪೋಕ್ಲು, ಜ. ೧೪: ಶಾಲಾ ದಿನಗಳಲ್ಲಿ ೮ ಗಂಟೆಗಳ ಕಾಲ ಮಾತ್ರ ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ ಇರುತ್ತಾರೆ. ರಜೆ ಸೇರಿದಂತೆ ಮತ್ತಿತರ ಸಮಯಗಳಲ್ಲಿ ಮಕ್ಕಳು ಪೋಷಕರೊಂದಿಗೆ ಕಾಲ ಕಳೆಯುತ್ತಾರೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಿಗಿಂತಲೂ ಪೋಷಕರ ಪಾತ್ರ ಮಹತ್ವದ್ದು ಎಂದು ‘ಶಕ್ತಿ’ ದಿನಪತ್ರಿಕೆಯ ಸಲಹಾ ಸಂಪಾದಕ, ಕೊಡಗು ಜಿಲ್ಲಾ ಜಾನಪದ ಪರಿಷತ್À ಅಧ್ಯಕ್ಷ ಬಿ.ಜಿ. ಅನಂತಶಯನ ಅಭಿಪ್ರಾಯಪಟ್ಟರು.
ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಸಮೀಪದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಹೇಳಬೇಕು ಎಂದು ಸಲಹೆ ನೀಡಿದರು.
ಇನ್ನೊಬ್ಬರಿಗೆ ಅವಲಂಬನೆ ಯಾಗದೆ ತಮ್ಮ ಬದುಕನ್ನು ತಾವೇ ರೂಪಿಸಿಕೊಳ್ಳಲು ಶಿಸ್ತು, ಶ್ರದ್ಧೆ, ಕಠಿಣ ಪರಿಶ್ರಮದ ಅಗತ್ಯವಿದೆ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಮತ್ತೋರ್ವ ಮುಖ್ಯ ಅತಿಥಿ ಮಡಿಕೇರಿ ಎಫ್.ಎಂ.ಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೌರೀರ ಡಾ.ಜಗತ್ ತಿಮ್ಮಯ್ಯ ಮಾತನಾಡಿ, ಮಕ್ಕಳಿಗೆ ಕಲಿಕೆಯ ಮೇಲೆ ಹೆಚ್ಚಿನ ಒತ್ತಡ ಹೇರುವುದು ಸರಿಯಲ್ಲ. ಶಿಕ್ಷಣವನ್ನು ಆಟದ ಜೊತೆಯಲ್ಲಿ ಕಲಿಸಬೇಕು. ಸಣ್ಣ ಪ್ರಾಯದಲ್ಲಿ ಕಲಿಕೆಯಲ್ಲಿ ಹಿಂದಿದ್ದ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಸಾಧನೆ ಮಾಡಿರುವ ದಾಖಲೆಗಳಿವೆ ಎಂದರು.
ವಿದ್ಯಾರ್ಥಿಗಳು ಕನ್ನಡ, ಇಂಗ್ಲೀಷ್ ಭಾಷೆಗಳೊಂದಿಗೆ ಇತರ ಎಲ್ಲಾ ಭಾಷೆಗಳ ಬಗ್ಗೆ ಹೆಚ್ಚಿನ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಸಂಸ್ಕಾರಯುತ ಶಿಕ್ಷಣದಿಂದ ದೇಶದ ಉತ್ತಮ ಪ್ರಜೆಯಾಗಿ ಹೊರಹೊಮ್ಮಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಉದ್ಗಂ ಫೌಂಡೇಶನ್‌ನ ಅಧ್ಯಕ್ಷ ಶರಣ್ ಹೊಸಮನಿ ಮಾತನಾಡಿ, ಪೋಷಕರ ಮನಸ್ಥಿತಿ ಹೇಗಿರುತ್ತದೋ ತಮ್ಮ ಮಕ್ಕಳು ಹಾಗೆಯೇ ಬೆಳೆಯುತ್ತಾರೆ. ಪೋಷಕರು ಮಕ್ಕಳಿಗೆ ಶಿಸ್ತು, ಸನ್ನಡತೆ, ಸಂಸ್ಕೃತಿಯ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ ಮಾತನಾಡಿದರು.
ವೇದಿಕೆಯಲ್ಲಿ ಬಾತ್ಮೀದಾರರಾದ ವಿದ್ಯಾ ಸುರೇಶ್, ಮತ್ತಿತರರು ಇದ್ದರು.
ಶಾಲಾ ವರದಿಯನ್ನು ವಿದ್ಯಾ ಸಂಸ್ಥೆಯ ಪ್ರಾಂಶುಪಾಲೆ ದಿವ್ಯಾ ಗಣೇಶ್ ವಾಚಿಸಿದರು. ಮುಖ್ಯ ಅತಿಥಿಗಳ ಪರಿಚಯವನ್ನು ವಿದ್ಯಾಸಂಸ್ಥೆಯ ನಿರ್ದೇಶಕಿ ಭವ್ಯ, ಪ್ರಾಂಶುಪಾಲೆ ದಿವ್ಯಾ ಗಣೇಶ್, ಮುಖ್ಯ ಶಿಕ್ಷಕ ಕೊಂಡಿರ ತಮ್ಮಯ್ಯ, ಶಿಕ್ಷಕಿ ರಮ್ಯಾ ನಂಜಪ್ಪ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಮತ್ತು ಶಿಕ್ಷಣೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ವಿದ್ಯಾರ್ಥಿ ಗಳಿಂದ ಪ್ರಾರ್ಥನೆ, ವಿದ್ಯಾಸಂಸ್ಥೆಯ ನಿರ್ದೇಶಕ ಶರತ್ ಮೊಣ್ಣಪ್ಪ ಸ್ವಾಗತಿಸಿದರು. ಶಿಕ್ಷಕಿ ಸಂದ್ಯಾ ನಿರೂಪಿಸಿ, ರಶ್ಮಿ ವಂದಿಸಿದರು.
ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.