ಶ್ರೀಮಂಗಲ, ಜ. ೧೪: ಮಕ್ಕಳಿಗೆ ವಿದ್ಯಾಭ್ಯಾಸದೊಂದಿಗೆ ಮಾನವೀಯ ಮೌಲ್ಯ ಗುಣವನ್ನು ಬೆಳೆಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಪೋಷಕರು ಸಹಕರಿಸಬೇಕಾಗಿದೆ ಎಂದು ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅಭಿಪ್ರಾಯ ಪಟ್ಟರು.

ಹುದಿಕೇರಿ ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯ ಸಮಾಜದಲ್ಲಿ ಕುಂಠಿತವಾಗುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಸಾಕಷ್ಟು ಆಘಾತಕಾರಿ ಚಟುವಟಿಕೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸಬೇಕಾಗಿದೆ ಎಂದು ತಿಳಿಮಾತನ್ನು ಹೇಳಿದರು.

ಪೋಷಕರು ಆಗಾಗ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡುವುದರ ಮೂಲಕ ತಮ್ಮ ಮಕ್ಕಳ ಗುಣನಡತೆಯ -ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರಲ್ಲಿ ಮಾಹಿತಿಯನ್ನು ಪಡೆದುಕೊಳ್ಳುವುದಲ್ಲದೇ ಶಾಲಾ ಹೊರಗಡೆಯೂ ಸಹ ತಮ್ಮ ಮಕ್ಕಳ ನಡತೆಯ ಬಗ್ಗೆ ಹೆಚ್ಚು ನಿಗಾವಹಿಸಬೇಕಾಗಿದೆ. ಮಕ್ಕಳು ದಾರಿ ತಪ್ಪುತ್ತಿದ್ದರೆ ಅದನ್ನು ಸರಿಪಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ಕರೆ ನೀಡಿದರು.

ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಸಾಲ್ಡನ್ ಮಾತನಾಡಿ, ಸಮಾಜದ ಕಟ್ಟ ಕಡೆಯ ಮಗುವಿಗೂ ಶಿಕ್ಷಣದ ಅವಶ್ಯಕತೆ ಇದ್ದು ಶಿಕ್ಷಣದಿಂದ ಉನ್ನತಿ ಸಾಧ್ಯ. ಈ ನಿಟ್ಟಿನಲ್ಲಿ ಲಿಟಲ್ ಫ್ಲವರ್ ಶಾಲೆಯು ಶ್ರೀಮಂಗಲ, ಜ. ೧೪: ಮಕ್ಕಳಿಗೆ ವಿದ್ಯಾಭ್ಯಾಸದೊಂದಿಗೆ ಮಾನವೀಯ ಮೌಲ್ಯ ಗುಣವನ್ನು ಬೆಳೆಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಪೋಷಕರು ಸಹಕರಿಸಬೇಕಾಗಿದೆ ಎಂದು ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಕಿರಿಯಮಾಡ ರಾಜ್ ಕುಶಾಲಪ್ಪ ಅಭಿಪ್ರಾಯ ಪಟ್ಟರು.

ಹುದಿಕೇರಿ ಲಿಟಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯ ಸಮಾಜದಲ್ಲಿ ಕುಂಠಿತವಾಗುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಸಾಕಷ್ಟು ಆಘಾತಕಾರಿ ಚಟುವಟಿಕೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸಬೇಕಾಗಿದೆ ಎಂದು ತಿಳಿಮಾತನ್ನು ಹೇಳಿದರು.

ಪೋಷಕರು ಆಗಾಗ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡುವುದರ ಮೂಲಕ ತಮ್ಮ ಮಕ್ಕಳ ಗುಣನಡತೆಯ -ಶೈಕ್ಷಣಿಕ ಪ್ರಗತಿಯ ಬಗ್ಗೆ ಶಿಕ್ಷಕರಲ್ಲಿ ಮಾಹಿತಿಯನ್ನು ಪಡೆದುಕೊಳ್ಳುವುದಲ್ಲದೇ ಶಾಲಾ ಹೊರಗಡೆಯೂ ಸಹ ತಮ್ಮ ಮಕ್ಕಳ ನಡತೆಯ ಬಗ್ಗೆ ಹೆಚ್ಚು ನಿಗಾವಹಿಸಬೇಕಾಗಿದೆ. ಮಕ್ಕಳು ದಾರಿ ತಪ್ಪುತ್ತಿದ್ದರೆ ಅದನ್ನು ಸರಿಪಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿದೆ ಎಂದು ಕರೆ ನೀಡಿದರು.

ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಸಾಲ್ಡನ್ ಮಾತನಾಡಿ, ಸಮಾಜದ ಕಟ್ಟ ಕಡೆಯ ಮಗುವಿಗೂ ಶಿಕ್ಷಣದ ಅವಶ್ಯಕತೆ ಇದ್ದು ಶಿಕ್ಷಣದಿಂದ ಉನ್ನತಿ ಸಾಧ್ಯ. ಈ ನಿಟ್ಟಿನಲ್ಲಿ ಲಿಟಲ್ ಫ್ಲವರ್ ಶಾಲೆಯು