ಮುಳ್ಳೂರು, ಜ. ೧೪: ಸಮೀಪದ ಬ್ಯಾಡಗೊಟ್ಟ ಗ್ರಾ.ಪಂ. ವ್ಯಾಪ್ತಿಯ ಬೆಂಬಳೂರು ಗ್ರಾಮದ ಶ್ರೀ ಬಾಣಂತಮ್ಮ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ತಾ. ೧೬ ರಂದು ನಡೆಯಲಿದೆ ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಬಳೂರು, ಶಿವರಳ್ಳಿ ಮತ್ತು ಊರುಗುತ್ತಿ ಗ್ರಾಮಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಬಾಣಂತಮ್ಮ ಮತ್ತು ಶ್ರೀ ಕುಮಾರ ಲಿಂಗೇಶ್ವರ ಜಾತ್ರಾ ಮಹೋತ್ಸವ ತಾ. ೧೬ ರಂದು ಬೆಳಿಗ್ಗೆ ೭ ಗಂಟೆಯಿAದ ಗ್ರಾಮದ ಶ್ರೀ ಬಾಣಂತಮ್ಮ ದೇವಸ್ಥಾನ, ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಗಳಲ್ಲಿ ವಿವಿಧ ಪೂಜಾ ಕಾರ್ಯ ನಡೆಯುತ್ತದೆ. ಈ ಸಂದರ್ಭದಲ್ಲಿ ಶ್ರೀ ದೇವಿರಮ್ಮ ಸುಗ್ಗಿ ಉತ್ಸವ ನಡೆಯ ಲಿದ್ದು, ಬೆಳಿಗ್ಗೆ ೯ ಗಂಟೆಯಿAದ ಮ. ೧೨ ಗಂಟೆವರೆಗೆ ಶ್ರೀ ಬಾಣಂತಮ್ಮನ ಜಾತ್ರೆ ನಡೆಯುತ್ತದೆ. ಮಧ್ಯಾಹ್ನ ೧೨ ಗಂಟೆ ಯಿಂದ ಸಂಜೆ ೫ ರವರೆಗೆ ಶ್ರೀ ಕುಮಾರ ಲಿಂಗೇಶ್ವರ ಜಾತ್ರೆ ನಡೆಯುತ್ತದೆ ಎಂದು ಜಾತ್ರಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.