ಕೊಡ್ಲಿಪೇಟೆ, ಜ. ೧೪: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೇರಿ ಗ್ರಾಮದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಸಭೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಎಸ್‌ಪಿ ಸೇರಿದಂತೆ ಇತರ ಪಕ್ಷಗಳ ೮೦ಕ್ಕೂ ಅಧಿಕ ಕಾರ್ಯಕರ್ತರು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಕೆರೆಕೇರಿಯ ಅರೆಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಭೆಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರಾದ ವಿಎಸ್‌ಎಸ್‌ಎನ್ ನಿರ್ದೇಶಕ ಸುಬ್ರಹ್ಮಣ್ಯ ಆಚಾರ್, ಗ್ರಾ.ಪಂ. ಮಾಜೀ ಅಧ್ಯಕ್ಷೆ ರೋಹಿಣಿ ಆಚಾರ್, ಅಪ್ಸರ್, ಶಾನು, ಜಗದೀಶ್, ದೇವರಾಜ್, ಜವರಯ್ಯ, ವಸಂತ್, ನಿವೃತ್ತ ಶಿಕ್ಷಕ ಯೋಗಪ್ಪ ಸೇರಿದಂತೆ ೮೦ಕ್ಕೂ ಅಧಿಕ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.