ಮಡಿಕೇರಿ, ಜ. ೧೬ : ಕೊಡಗು ವಿಕಸನ ಸಂಸ್ಥೆ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ‘ಪರೀಕ್ಷೆ ಸಿದ್ಧತೆ ಮಾರ್ಗದರ್ಶನ’ ಕಾರ್ಯಕ್ರಮ ತಾ. ೧೭ ರಂದು (ಇಂದು) ಸೋಮವಾರಪೇಟೆ ಹಾಗೂ ಕುಶಾಲನಗರದಲ್ಲಿ ನಡೆಯಲಿದೆ. ಸೋಮವಾರಪೇಟೆಯ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಬೆಳಗ್ಗೆ ೧೦ ಗಂಟೆಗೆ, ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಮಧ್ಯಾಹ್ನ ೨ ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ, ಏಕಲವ್ಯ ಪ್ರಶಸ್ತಿ ವಿಜೇತ ಅಥ್ಲೀಟ್ ತೀತಮಾಡ ಅರ್ಜುನ್ ದೇವಯ್ಯ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಸೋಮವಾರಪೇಟೆ ಹಾಗೂ ಕುಶಾಲನಗರ ವ್ಯಾಪ್ತಿಯ ಶಾಲೆಗಳ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲಿ ದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ಉಪಸ್ಥಿತರಿರಲಿದ್ದಾರೆಂದು ಕೊಡಗು ವಿಕಸನದ ಪ್ರಮುಖ ಚೈಯ್ಯಂಡ ಸತ್ಯ ಗಣಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.