ಕೂಡಿಗೆ, ಜ. ೧೬: ಹುದುಗೂರು ಗ್ರಾಮದಲ್ಲಿರುವ ಗೋ ಸದನ ಜಾಗಕ್ಕೆ ಸಂಬAಧಿಸಿದ ವಿಶೇಷ ಸಭೆಯು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚನೆಯಂತೆ ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.
ಈಗಾಗಲೇ ಹುದುಗೂರು ಗೋ ಸದನ ಜಾಗ ಸಾಮಾಜಿಕ ಅರಣ್ಯ ಇಲಾಖೆಯ ಹೆಸರಿಗೆ ದಾಖಲೆಗಳು ಅಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮತ್ತು ಪಶುಪಾಲನಾ ಇಲಾಖೆ, ಕಂದಾಯ ಇಲಾಖೆಯ ಸಮ್ಮುಖದಲ್ಲಿ ಸಭೆಯನ್ನು ನಡೆಸಿ ಜಾಗದ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಎರಡೂ ಇಲಾಖೆಯ ವರದಿಯನ್ನು ಸಮಗ್ರವಾಗಿ ಕಂದಾಯ ಇಲಾಖೆಯವರು ಪರಿಶೀಲನೆ ನಡೆಸಿ ಗೋಸದನದ ಜಾಗದ ಬದಲಾಗಿ ಅರಣ್ಯ ಇಲಾಖೆಯ ಹೆಸರಿಗೆ ಸಮೀಪದಲ್ಲಿ ಬದಲಿ ಜಾಗದ ವ್ಯವಸ್ಥೆ ಮಾಡಿ ಅರಣ್ಯ ಇಲಾಖೆಗೆ ಒದಗಿಸಲು ನಿರ್ಧರಿಸಲಾಯಿತು.
ಇದಕ್ಕೆ ಸಂಬAಧಿಸಿದAತೆ ಜಿಲ್ಲಾಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಗೋ ಸದನ ಜಾಗವನ್ನು ಉಳಿಸಿಕೊಂಡು, ಈಗಿರುವ ಪಶುಪಾಲನಾ ಇಲಾಖೆಯ ಪಶು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಮತ್ತು ಅದರ ಅಭಿವೃದ್ಧಿಗೆ ಇಲಾಖೆಯ ಮೂಲಕ ಕೈಗೊಳ್ಳುವ ಕಾರ್ಯ ಸೂಚಿಯ ಬಗ್ಗೆ ಚರ್ಚೆಗಳು ನಡೆದವು. ಈ ಸಂದರ್ಭ ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿ ಡಾ. ಪ್ರಸನ್ನ, ತಾಲೂಕು ಸಾಮಾಜಿಕ ಅರಣ್ಯಾಧಿಕಾರಿ ಗಾನಶ್ರಿ, ಕಂದಾಯ ನಿರೀಕ್ಷಕ ಸಂತೋಷ್, ಲೆಕ್ಕಾಧಿಕಾರಿ ಗುರುದರ್ಶನ್, ಹುದುಗೂರು ಉಮಾಮಹೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ, ನೀರು ಬಳಕೆದಾರರ ಸಂಘದ ಮಾಜಿ ಅಧ್ಯಕ್ಷ ಗಣೇಶ್, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ವಿಮಲ, ಗ್ರಾಮ ಪಂಚಾಯಿತಿ ಹುದುಗೂರು ವ್ಯಾಪ್ತಿಯ ಸದಸ್ಯರಾದ ಹೆಚ್.ಎಸ್. ರವಿ, ರತ್ನಮ್ಮ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಿಣ್ಣಪ್ಪ ಸೇರಿದಂತೆ ಯುವಕ ಮಂಡಳಿ ಅಧ್ಯಕ್ಷ, ಸದಸ್ಯರು ಗ್ರಾಮದ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.