ವೀರಾಜಪೇಟೆ, ಜ. ೧೬: ವೀರಾಜಪೇಟೆ ಕರ್ನಾಟಕ ಸಂಘದ ವತಿಯಿಂದ ೭೪ನೇ ಗಣರಾಜ್ಯೋತ್ಸವ ಅಂಗವಾಗಿ ತಾ. ೨೭ ರಂದು ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮವನ್ನು ಸ್ಥಳಿಯ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ತಿಳಿಸಿದ್ದಾರೆ

ತಾ. ೨೭ ರಂದು ಪೂರ್ವಾಹ್ನ ೧೦.೩೦ ಗಂಟೆಯಿAದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ. ೧ನೇ ತರಗತಿಯಿಂದ ೪ನೇ ತರಗತಿ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ (ಒಂದು ಶಾಲೆಯಿಂದ ಇಬ್ಬರಿಗೆ ಮಾತ್ರ ಅವಕಾಶ), ೫ನೇ ತರಗತಿಯಿಂದ ೭ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಹಾಡಿಗೆ ನೃತ್ಯ (ಒಂದು ಶಾಲೆಯಿಂದ ೬ ವಿದ್ಯಾರ್ಥಿಗಳ ೨ ತಂಡಗಳಿಗೆ ಮಾತ್ರ ಅವಕಾಶ) ನಡೆಯಲಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಎಂ. ಬೆಲ್ಲು ಬೋಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಮತ್ತು ಸಂಘದ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಬೆಲ್ಲು ಬೋಪಯ್ಯ ತಿಳಿಸಿದ್ದಾರೆ.