ಮಡಿಕೇರಿ, ಜ. ೧೬: ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗ ದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ತಾ. ೧೪ ರಂದು ಸಂಜೆಯಿAದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೆÆÃಘ್ನ ಹೋಮ, ವಾಸ್ತು ಪೂಜೆ, ವಾಸ್ತುಹೋಮ, ದಿಶಾಬಲಿ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.

ತಾ. ೧೫ ರಂದು ಬೆಳಿಗ್ಗೆಯಿಂದ ಪುಣ್ಯಾಹ, ಗಣಪತಿಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲಪೂಜೆ, ಆಶ್ಲೇಷ ಬಲಿ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನದಾನ ನಡೆಯಿತು. ಸಂಜೆ ರಂಗಪೂಜೆ, ಬಲಿ ಉತ್ಸವ ರಾಜಾಂಗನಾ ಪ್ರಸಾದ, ಪೀಠಪೂಜೆ, ಶುದ್ಧ ಕಲಶಾಭಿಷೇಕ, ಮಂತ್ರಾಕ್ಷತೆ, ಅನ್ನಪ್ರಸಾದ ವಿತರಣೆ ನೆರವೇರಿತು.