ಕುಶಾಲನಗರ, ಜ. ೧೬: ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯಕ್, ಅವರ ನಿವಾಸಕ್ಕೆ ನುಗ್ಗಿ ಬೆದರಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಜನಪ್ರತಿನಿಧಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕುಶಾಲನಗರದ ವಿವಿಧ ಸಂಘ ಸಂಸ್ಥೆಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಕುಶಾಲನಗರ ಬೈಚನಹಳ್ಳಿಯ ಗೆಳೆಯರ ಬಳಗದ ನೇತೃತ್ವದಲ್ಲಿ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ, ಅಖಿಲ ಕರ್ನಾಟಕ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘ, ಕುಶಾಲನಗರ ನಗರ ಕಾಂಗ್ರೆಸ್, ಜೆಡಿಎಸ್, ದಲಿತ ಸಂಘರ್ಷ ಸಮಿತಿ (ಭೀಮವಾದ), ಬೀದಿ ಬದಿ ವ್ಯಾಪಾರಿಗಳ ಸಂಘ ಮತ್ತಿತರ ಸಂಘ ಸಂಸ್ಥೆಗಳ ಪ್ರಮುಖರು ಕುಶಾಲನಗರ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಹಲ್ಲೆಕೋರರು ಮತ್ತು ಭೂ ಮಾಫಿಯಾ ದಂಧೆಕೋರರ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ, ಪುರಸಭೆ ಸದಸ್ಯ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕುಶಾಲನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಭೂ ಮಾಫಿಯಾ ಮಿತಿಮೀರಿದ್ದು, ಅಧಿಕಾರಿ, ಸಿಬ್ಬಂದಿಗಳಿಗೆ ಬೆದರಿಕೆ ಹಾಕುವ ಮೂಲಕ ಬಡಾವಣೆಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ವಂಚನೆ ಮಾಡುತ್ತಿದ್ದಾರೆ. ಇಂತಹ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ಸಂದರ್ಭ ಹಲ್ಲೆಗೊಳಗಾದ ಮುಖ್ಯಾಧಿಕಾರಿ ಶಿವಪ್ಪ ನಾಯಕ್ ಅವರಿಗೆ ಹೆಲ್ಮೆಟ್ ನೀಡುವ ಮೂಲಕ ಅಧಿಕಾರಿಗಳಿಗೆ ರಕ್ಷಣೆಯ ಅಗತ್ಯತೆಯ ಬಗ್ಗೆ ಪ್ರತಿಭಟನಾನಿರತರು ಅಣಕಿಸಿದರು.

ಅಖಿಲ ಕರ್ನಾಟಕ ವಾಲ್ಮೀಕಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾಧ್ಯಕ್ಷ ಕೆ. ಎನ್. ಅಶೋಕ್ ಮಾತನಾಡಿ, ಅಕ್ರಮ ಮತ್ತು ಅನಧಿಕೃತ ಬಡಾವಣೆಗಳಿಗೆ ದಾಖಲೆ ಮಾಡಿಸಲು ರಿಯಲ್ ಎಸ್ಟೇಟ್ ಉದ್ಯಮಿ ಅಧಿಕಾರಿಗೆ ಬೆದರಿಕೆ ಹಾಕಿ ನಿಯಮಬಾಹಿರವಾಗಿ ಬಡಾವಣೆ ದಾಖಲೆ ಸೃಷ್ಟಿಸಲು ಹುನ್ನಾರ ನಡೆಸುತ್ತಿರುವುದಾಗಿ ಆರೋಪಿಸಿದರು. ಈ ಸಂಬAಧ ಜನಪ್ರತಿನಿಧಿ ಈ ಪ್ರಕರಣಕ್ಕೆ ಕುಮ್ಮಕು ನೀಡಿದ್ದು, ಅವರ ಸದಸ್ಯತ್ವ ತಕ್ಷಣ ರದ್ದುಗೊಳಿಸಲು ಕ್ರಮಕೈಗೊಳ್ಳಬೇಕು, ಅಧಿಕಾರಿಗೆ ಬೆದರಿಕೆ ಒಡ್ಡಿದ ಇಬ್ಬರನ್ನೂ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಗೆಳೆಯರ ಬಳಗದ ಪ್ರಮುಖರು ಪುರಸಭೆ ಸದಸ್ಯ ಬಿ.ಎಲ್. ಜಗದೀಶ್, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು. ಪುರಸಭೆ ಅಧಿಕಾರಿ ಶಿವಪ್ಪ ನಾಯಕ್ ಅವರ ತಪ್ಪಿದ್ದಲ್ಲಿ ಅವರ ಮೇಲೆ ಜಿಲ್ಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಗೆಳೆಯರ ಬಳಗದ ಪೃಥ್ವಿರಾಜ್ ಮಾತನಾಡಿ, ಕುಶಾಲನಗರದಲ್ಲಿ ಭೂ ಮಾಫಿಯಾದಂಧೆ ಅಧಿಕವಾಗಿದ್ದು, ಸರ್ಕಾರ ಆಸ್ತಿಯನ್ನು ಕೊಳ್ಳೆ ಹೊಡೆಯುತ್ತಿರುವ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕುಶಾಲನಗರ ಪುರಸಭೆ ಕಚೇರಿ ಮುಂಭಾಗ ಘೋಷಣೆ ಕೂಗಿ ಪ್ರತಿಭಟಿಸಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ನಂತರ ತಾಲೂಕು ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ಜಯಲಕ್ಷö್ಮಮ್ಮ, ಸುಂದರೇಶ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಇದ್ದರು.

ಕುಶಾಲನಗರ ಪುರಸಭೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಪಟ್ಟಣ ಪೌರಕಾರ್ಮಿಕರ ಸಂಘ ಕಪ್ಪುಪಟ್ಟಿ ಧರಿಸಿ ಕಚೇರಿಯ ಮುಂದೆ ಪ್ರತಿಭಟಿಸಿ ಘಟನೆ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಎಸ್. ಆರ್. ಗಣೇಶ್ ಮತ್ತು ಕಾರ್ಯದರ್ಶಿ ನಂಜುAಡ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಮತ್ತು ಸಿಬ್ಬಂದಿಗಳು ಮೌನ ಪ್ರತಿಭಟನೆ ಮಾಡಿದರು.