ಕಣಿವೆ, ಜ. ೧೬ : ಕೂಡುಮಂಗಳೂರು ಗ್ರಾಮದ ಗ್ರಾಮದೇವತೆ ದೊಡ್ಡಮ ದೇವಾಲಯದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಿದ್ದ ಸಾಧನಾ ಸಮಾವೇಶವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಯೋಜನೆ ಅಭೂತಪೂರ್ವವಾದ ಮೈಲಿಗಲ್ಲು ಸಾಧಿಸಿರುವುದು ಶ್ಲಾಘನೀಯವಾದುದು. ಯೋಜನೆ ಸೇರಿದಂತೆ ರಾಷ್ಟಿçÃಕೃತ ಬ್ಯಾಂಕುಗಳಿAದ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ಅಭಿವೃದ್ಧಿ ಹೊಂದುವತ್ತ ಪ್ರತಿಯೊಬ್ಬರು ಮುಂದಾಗಬೇಕು ಎಂದು ಶಾಸಕ ರಂಜನ್ ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಕೇವಲ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿದ್ದ ಹೆಣ್ಣು ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಮಾತನಾಡಿ, ಗುಂಪು ಭದ್ರತೆಯಲ್ಲಿ ಸಾಲ ಕೊಡಲಾಗುತ್ತಿದೆ. ಆರ್ಥಿಕ ಶಿಸ್ತು ಅತೀ ಮುಖ್ಯ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ದುಡಿಮೆಗೆ ಹೆಚ್ಚಿನ ಒತ್ತು ಕೊಡಬೇಕಿದೆ ಹೇಳಿದರು. ಧರ್ಮಸ್ಥಳ ಯೋಜನೆಯ ತಾಲೂಕು ಯೋಜನಾಧಿಕಾರಿ ರೋಹಿತ್, ಕೂಡ್ಲೂರು ಗ್ರಾಮದ ಪ್ರಮುಖರಾದ ಜವರೇಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಕೆ. ಭೋಗಪ್ಪ, ರಾಜಾಚಾರ್, ವಿ.ಡಿ. ಪುಂಡರೀಕಾಕ್ಷ, ಕೆ.ಎನ್. ಪವನ್ ಕುಮಾರ್ ಕುಶಾಲನಗರ ಗ್ರಾಮಾಂತರ ಠಾಣೆಯ ಪಿಎಸ್‌ಐ ಚಂದ್ರಶೇಖರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ಅಧ್ಯಕ್ಷ ಗಿರೀಶ್, ಯೋಜನೆಯ ಮೇಲ್ವಿಚಾರಕರಾದ ಕೆ.ಎಸ್.ನಾಗರಾಜು, ಚೈತನ್ಯ, ಮೋಹಿತ್ ಇದ್ದರು.