ಮುಳ್ಳೂರು, ಜ. ೧೬ : ಸಮಿಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಗೌರಮ್ಮ ಶಾಂತಮಲ್ಲಪ್ಪ ಸಭಾಂಗಣದಲ್ಲಿ ಹಾಸನ, ಅರಕಲಗೂಡು ಮತ್ತು ಕೊಡ್ಲಿಪೇಟೆ ಪದವಿಪೂರ್ವ ಕಾಲೇಜುಗಳ ವತಿಯಿಂದ ಕೊಡ್ಲಿಪೇಟೆ ಹೋಬಳಿಯ ವಿವಿಧ ಪ್ರೌಢಶಾಲೆಗಳ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಯಿತು. ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ನಿರ್ದೇಶಕ ಯತೀಶ್ ಕುಮಾರ್ ವಿಜ್ಞಾನ ಪ್ರಯೋಗ ಪ್ರಾತ್ಯಕ್ಷಿತೆಯನ್ನು ಉದ್ಘಾಟಿಸಿ ಮಾತನಾಡಿ, ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮತ್ತು ಅರಿವಿನ ಅಗತ್ಯದ ಜೊತೆಯಲ್ಲಿ ವಿಜ್ಞಾನ ಪ್ರಯೋಗದ ಬಗ್ಗೆಯೂ ಅರಿವು ಇರಬೇಕಾಗುತ್ತದೆ ಈ ನಿಟ್ಟಿನಲ್ಲಿ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರಯೋಗಳ ಮೂಲಕ ಅರಿವು ಮೂಡಿಸುತ್ತಿರುವ ಕಾರ್ಯ ಶ್ಲಾಘನಿಯ ಎಂದರು.

ಹಾಸನದ ನಿವೃತ್ತ ವಿಜ್ಞಾನ ಶಿಕ್ಷಕ ಪಾರ್ಥಸಾರಥಿ ನೇತೃತ್ವದಲ್ಲಿ ಬೆಳಿಗ್ಗೆ ೧೦ ರಿಂದ ಸಂಜೆ ೪.೩೦ ರವರೆಗೆ ನಿರಂತರವಾಗಿ ವಿದ್ಯಾರ್ಥಿಗಳಿಗೆ ವಿಜ್ಞಾನದ ವಿವಿಧ ಪ್ರಕಾರಗಳ ಬಗ್ಗೆ ಪ್ರಯೋಗ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಯೋಗಿಕವಾಗಿ ಅರಿವು ಮೂಡಿಸಿದರು. ಹೋಬಳಿಯ ವಿವಿಧ ಪ್ರೌಢಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಅಬ್ದುಲ್ ರಬ್, ಅರಕಲಗೂಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್‌ಕುಮಾರ್, ವಿವಿಧ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಜರಿದ್ದರು.