ಸೋಮವಾರಪೇಟೆ: ವಿದ್ಯಾರ್ಥಿಗಳು ದುಶ್ಚಟಗಳಿಂದ ಮುಕ್ತರಾದರೆ ಮಾತ್ರ ಭವಿಷ್ಯ ಉಜ್ವಲವಾಗಲಿದೆ. ದುಶ್ಚಟಗಳಿಗೆ ಬಲಿಯಾದರೆ ಇಡೀ ಜೀವನ ನಾಶ ವಾಗಲಿದೆ ಎಂದು ಶನಿವಾರಸಂತೆ ಪೊಲೀಸ್ ಇನ್ಸ್ಪೆಕ್ಟರ್ ಪರಶಿವ ಮೂರ್ತಿ ಕಿವಿಮಾತು ಹೇಳಿದರು.

ಸೋಮವಾರಪೇಟೆ ಪುಷ್ಪಗಿರಿ ಜೇಸಿ ಸಂಸ್ಥೆಯ ವತಿಯಿಂದ ಸಂತ ಜೋಸೆಫರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾ ನಂದರ ದಿನ ಹಾಗೂ ರಾಷ್ಟಿçÃಯ ಯುವ ದಿನಾಚರಣೆ ಕಾರ್ಯ ಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೆಲ ವಿದ್ಯಾರ್ಥಿಗಳು ಈ ಪಿಡುಗಿಗೆ ಬಲಿಯಾಗುತ್ತಿರುವ ಬಗ್ಗೆ ತಿಳಿದು ಬಂದಿದೆ. ಶಿಕ್ಷಕರು ಮಾಹಿತಿ ಯನ್ನು ಕಲೆ ಹಾಕಿ ಪೊಲೀಸರಿಗೆ ತಿಳಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಕೊಡಿಸಿ, ದುಶ್ಚಟಗಳಿಂದ ಮುಕ್ತಗೊಳಿಸುವ ಅವಕಾಶವಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಯ ವೀರಮಾತೆ ಚರ್ಚ್ನ ಧರ್ಮಗುರು ಎಂ. ರಾಯಪ್ಪ, ಸ್ವಾಮಿ ವಿವೇಕಾ ನಂದರು ಮಹಾನ್ ಅಧ್ಯಾತ್ಮಿಕ ವ್ಯಕ್ತಿ ಹಾಗೂ ದಾರ್ಶನಿಕರಾಗಿದ್ದರು. ಯುವ ಜನತೆಗೆ ಸ್ಪೂರ್ತಿಯಾಗಿದ್ದರು. ಸಹಿಷ್ಣುತಾ ಭಾವವನ್ನು ಪ್ರಪಂಚಕ್ಕೆ ಸಂದೇಶ ನೀಡಿದರು. ಇವರು ಯುವ ಜನಾಂಗದ ಬಗ್ಗೆ ಹೆಚ್ಚಿನ ವಿಶ್ವಾಸ ಹೊಂದಿದ್ದರು. ಈ ಕಾರಣದಿಂದ ಮಹಾನ್ ಚೇತನ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜೇಸಿ ಅಧ್ಯಕ್ಷೆ ಎಂ.ಎ. ರುಬಿನಾ, ಜೇಸಿರೇಟ್ ಅಧ್ಯಕ್ಷೆ ಪವಿತ್ರ ಲಕ್ಷಿö್ಮÃಕುಮಾರ್, ಜೂನಿಯರ್ ಜೇಸಿ ಅಧ್ಯಕ್ಷೆ ಎಸ್.ಎ. ರಿಶಾ, ಜೇಸಿ ಸ್ಥಾಪಕ ಅಧ್ಯಕ್ಷ ಕೆ.ಎನ್. ತೇಜಸ್ವಿ, ಜೇಸಿ ಕಾರ್ಯದರ್ಶಿ ಜಗ ದಾಂಭ, ಕಾಲೇಜಿನ ಪ್ರಾಂಶುಪಾಲ ಬಿ.ಆರ್. ಹರೀಶ್, ಪೊಲೀಸ್ ಮಹಿಳಾ ಸಿಬ್ಬಂದಿ ಪೂರ್ಣಿಮಾ ಇದ್ದರು.ನಾಪೋಕ್ಲು: ಯುವಶಕ್ತಿ ದೇಶದ ಶಕ್ತಿ. ಯುವಕರು ತಮ್ಮೊಳಗಿನ ಶಕ್ತಿಯನ್ನು ಅರಿತುಕೊಂಡು ಮುನ್ನಡೆಯಬೇಕು ಎಂದು ಸಾಲಿಗ್ರಾಮದ ದಿವೈನ್ ಪಾರ್ಕಿನ ಅಧಿಕಾರಿ ಪದ್ಮಲತಾ ಹೇಳಿದರು.

ಸಮೀಪದ ಮೂರ್ನಾಡಿನ ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಏರ್ಪಡಿಸ ಲಾಗಿದ್ದ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭ ಪದವಿಪೂರ್ವ ಕಾಲೇಜಿನ ಪ್ರಾಂಶು ಪಾಲೆ ದೇವಕಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದಮಯಂತಿ, ಉಪನ್ಯಾಸಕಿ ಮಾಲತಿ, ಮೂರ್ನಾಡು ಹಾಗೂ ಮಡಿಕೇರಿ ವಿವೇಕ ಜಾಗೃತ ಬಳಗದ ಕಾರ್ಯಕರ್ತರು, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವೀರಾಜಪೇಟೆ: ಸ್ವಾಮಿ ವಿವೇಕಾನಂದರ ಜೀವನ ಹಾಗೂ ಬೋಧನೆಗಳು ನವ ಸಮಾಜಕ್ಕೆ ಆದರ್ಶವಾಗಿವೆ ಎಂದು ವೀರಾಜಪೇಟೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅಭಿಪ್ರಾಯಪಟ್ಟರು.

ಸೆಂಟ್ ಆ್ಯನ್ಸ್ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ಆಚರಿಸುವ ರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ತಮ್ಮ ಬಾಲ್ಯ ಜೀವನದಿಂದಲೇ ಸಾಧಕರಾಗಿದ್ದರು. ಅವರ ತತ್ವಗಳು ಆಧುನಿಕ ಜಗತ್ತಿನಲ್ಲಿ ಮಹತ್ವದ್ದಾಗಿದೆ. ಸದಾ ಯುವ ಜನತೆಯ ಪ್ರೇರಕ ಮಾರ್ಗ ದರ್ಶಕರಾದ ವಿವೇಕಾನಂದರು ಅಧ್ಯಾತ್ಮಿಕತೆಯ ಬಗ್ಗೆ ಒಲವು ಹೊಂದಿದ್ದರು ಎಂದು ಹೇಳಿದರು.

ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಅರ್ಜುನ್ ಹೆಚ್.ಆರ್. ರಾಷ್ಟಿçÃಯ ಯುವ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದರು ಮಹಾನ್ ಸಂತರಾಗಿದ್ದರು. ಅವರಿಗೆ ಬುದ್ಧಿ, ಏಕಾಗ್ರತೆ, ಅಧ್ಯಾತ್ಮಿಕತೆ ಬಗ್ಗೆ ಒಲವು ಇತ್ತು. ಅವರು ಯುವ ಶಕ್ತಿಯ ಮಾರ್ಗದರ್ಶಕರಾಗಿದ್ದರಲ್ಲದೆ ಸಮಾಜ ಸುಧಾರಣೆಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ. ಉಪಸ್ಥಿತರಿದ್ದರು. ಕಾರ್ಯ ಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಹಾಗೂ ಎಫ್.ಎಂ.ಸಿ. ಕಾಲೇಜಿನ ಎನ್.ಎಸ್.ಎಸ್. ಘಟಕ, ರೆಡ್ ಕ್ರಾಸ್ ಘಟಕದ ಸಹಯೋಗ ದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಡಾ. ಮೇಜರ್ ಕುಶ್ವಂತ್ ಕೋಳಿಬೈಲು, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಸುನಿತ ಮುತ್ತಮ್ಮ, ಮೇಜರ್ ಡಾ. ರಾಘವ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಮೇಜರ್ ರಾಘವ್ ವಹಿಸಿದ್ದರು.

ಕುಶ್ವಂತ್ ಕೋಳಿಬೈಲು ಮಾತನಾಡಿ, ವಿವೇಕಾನಂದರು ಆಧುನಿಕ ಭಾರತದ ನಿರ್ಮಾತೃ ಎಂದು ಹೇಳಿದರು. ಸುನಿತ ಮುತ್ತಮ್ಮ ಮಾತನಾಡಿ, ಹೆಚ್.ಐ.ವಿ.-ಏಡ್ಸ್ ಕುರಿತು ಅಜ್ಞಾನ ಹಾಗೂ ಇದರ ನಿರ್ಲಕ್ಷ್ಯ ಬಹಳ ಅಪಾಯಕಾರಿ ಎಂದರಲ್ಲದೆ, ಸದೃಢ, ಸಮೃದ್ಧ ಭಾರತ ಕಟ್ಟುವಲ್ಲಿ ಶ್ರಮವಹಿಸಬೇಕಾದದ್ದು ನಮ್ಮ ಕರ್ತವ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮೇಜರ್ ಡಾ. ರಾಘವ, ವಿದ್ಯಾರ್ಥಿಗಳು ಆಧುನಿಕ ಭಾರತದ ನಿರ್ಮಾತೃ ಎಂದು ಹೇಳಿದರು. ಸುನಿತ ಮುತ್ತಮ್ಮ ಮಾತನಾಡಿ, ಹೆಚ್.ಐ.ವಿ.-ಏಡ್ಸ್ ಕುರಿತು ಅಜ್ಞಾನ ಹಾಗೂ ಇದರ ನಿರ್ಲಕ್ಷ್ಯ ಬಹಳ ಅಪಾಯಕಾರಿ ಎಂದರಲ್ಲದೆ, ಸದೃಢ, ಸಮೃದ್ಧ ಭಾರತ ಕಟ್ಟುವಲ್ಲಿ ಶ್ರಮವಹಿಸಬೇಕಾದದ್ದು ನಮ್ಮ ಕರ್ತವ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮೇಜರ್ ಡಾ. ರಾಘವ, ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶ ತತ್ವಗಳನ್ನು ಪಾಲಿಸಬೇಕು ಎಂದು ಸಲಹೆಯಿತ್ತರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕದ ಯೋಜನಾಧಿಕಾರಿ ಡಾ. ಮಹದೇವಯ್ಯ, ಡಾ. ಗಾಯತ್ರಿ, ಡಾ. ಗೀತಾಂಜಲಿ, ಯುವ ರೆಡ್ ಕ್ರಾಸ್ ಘಟಕದ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಗಳು ಹಾಗೂ ಎನ್.ಎಸ್.ಎಸ್ ಘಟಕದ ನಾಯಕರು ಹಾಜರಿದ್ದರು.