ಸೋಮವಾರಪೇಟೆ, ಜ. ೧೬: ನಿಸರ್ಗ ರಮಣೀಯ ಸೌಂದರ್ಯದ ಪುಷ್ಪಗಿರಿ ಬೆಟ್ಟತಪ್ಪಲಿನ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಇತಿಹಾಸ ಪ್ರಸಿದ್ಧ ಶ್ರೀಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ೬೪ನೇ ವರ್ಷದ ವಾರ್ಷಿಕ ಮಹಾರಥೋತ್ಸವ ಸಹಸ್ರಾರು ಮಂದಿ ಭಕ್ತಾದಿಗಳ ಸಮ್ಮುಖದಲ್ಲಿ, ವಿವಿಧ ಧಾರ್ಮಿಕ ಕೈಂಕರ್ಯಗಳೊAದಿಗೆ ಇಂದು ವೈಭವಯುತವಾಗಿ ನೆರವೇರಿತು. ೮೦೦ಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಶ್ರೀಕುಮಾರಲಿಂಗೇಶ್ವರ ಸ್ವಾಮಿ ದೇವಾಲಯದ ೬೪ನೇ ವರ್ಷದ ಮಹಾ ರಥೋತ್ಸವಕ್ಕೆ ಕೊಡಗು ಜಿಲ್ಲೆ ಸೇರಿದಂತೆ ವಿವಿಧೆಡೆಯಿಂದ ಸಹಸ್ರಾರು ಮಂದಿ ಭಕ್ತರು ಆಗಮಿಸಿ ವಿವಿಧ ಪೂಜಾ ವಿಧಿ ವಿಧಾನಗಳಲ್ಲಿ ಪಾಲ್ಗೊಂಡರು.
ಶಾAತಳ್ಳಿ ಗ್ರಾಮದಲ್ಲಿ ವರ್ಷಕ್ಕೊಮ್ಮೆ ಜರುಗುವ ಜಾತ್ರೆ ಹಾಗೂ ರಥೋತ್ಸವ ಈ ಬಾರಿಯೂ ವೈಭವಯುತವಾಗಿ ನೆರವೇರಿತು. ಕಳೆದ ತಾ.೧೩ ರಂದು ಪ್ರಾರ್ಥನಾ ಪೂಜೆಯೊಂದಿಗೆ ವಿಧ್ಯುಕ್ತ ಚಾಲನೆಗೊಂಡಿರುವ ಪ್ರಸಕ್ತ ವರ್ಷದ ಜಾತ್ರೆಗೆ ತಾ.೧೭ರಂದು (ಇಂದು) ತೆರೆಬೀಳಲಿದೆ. ಜಾತ್ರೆ ಪ್ರಯುಕ್ತ ದೇವಾಲಯಲ್ಲಿ ಕರುವಿನ ಹಬ್ಬ,ಗರುಡಗಂಬದಲ್ಲಿ ತುಪ್ಪದ ನಂದಾದೀಪ ಬೆಳಗುವುದು, ಪುಷ್ಪಗಿರಿ ಬೆಟ್ಟದಲ್ಲಿರುವ ಪುರಾತನ ದೇವಾಲಯದಲ್ಲಿ ದೀಪೋತ್ಸವ, ಅರಸುಬಲ ಸೇವೆ ಸೇರಿದಂತೆ ಪ್ರತಿದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದ್ದು, ಇಂದು ಮಹಾರಥೋತ್ಸವ ಜರುಗಿತು.
ನಿರಂತರವಾಗಿ ಅನಾದಿಕಾಲ ದಿಂದಲೂ ನಡೆದುಬಂದ ಪದ್ಧತಿಯ ಮೇರೆ ಕೂತಿ ನಾಡು, ತೋಳುನಾಡು, ಪುಷ್ಪಗಿರಿ, ಯಡೂರು, ತಲ್ತರೆಶೆಟ್ಟಳ್ಳಿ ಗ್ರಾಮಸ್ಥರು ಸೇರಿದಂತೆ, ಹೊರ ಜಿಲ್ಲೆಯ ನೂರಾರು
(ಮೊದಲ ಪುಟದಿಂದ) ಮಂದಿ ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಶಾಂತಳ್ಳಿಯ ರಥಬೀದಿಯಲ್ಲಿ ಹೊರಟ ರಥವನ್ನು ಭಕ್ತಾದಿಗಳು ದಾರಿಯ ಇಕ್ಕೆಲಗಳಲ್ಲೂ ಹರ್ಷೋದ್ಗಾರದೊಂದಿಗೆ ಸ್ವಾಗತಿಸಿದರು. ಜಾತ್ರೋತ್ಸವ ಅಂಗವಾಗಿ ದೇವಾಲಯ ಸಮಿತಿ ಆಶ್ರಯದಲ್ಲಿ ಮಧ್ಯಾಹ್ನ ಸಾವಿರಾರು ಮಂದಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ದೇವಾಲಯದಲ್ಲಿ ಪಲ್ಲಕ್ಕಿ ಉತ್ಸವ ನಡೆದು, ತಾ.೧೭ರಂದು (ಇಂದು) ಮಹಾ ಸಂಪ್ರೋಕ್ಷಣೆ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ನಾರಿಕೇಳ ಜಲಾಭಿಷೇಕ, ಮಹಾಮಂಗಳಾರತಿ ನಂತರ ಮಂಗಳ ಪ್ರಾರ್ಥನೆ ನಡೆಯುವ ಮೂಲಕ ಪ್ರಸಕ್ತ ವರ್ಷದ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ತೆರೆಬೀಳಲಿದೆ.
ಜಾತ್ರೋತ್ಸವದ ಅಂಗವಾಗಿ ತಾಲೂಕಿನ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ವತಿಯಿಂದ ರೈತರು ಬೆಳೆದ ಬೆಳೆಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಸ್ಥಳೀಯ ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಅಂತರ ಜಿಲ್ಲಾ ಮಟ್ಟದ ಪುರುಷರ ಮ್ಯಾಟ್ ಕಬಡ್ಡಿ ಮತ್ತು ವಾಲಿಬಾಲ್ ಹಾಗೂ ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದವು. ಹೊರ ಜಿಲ್ಲೆಯ ನೂರಾರು ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
ಸುತ್ತಮುತ್ತಲೂ ಬೆಟ್ಟದ ಸಾಲು, ಹಚ್ಚಹಸಿರಿನ ಪ್ರಕೃತಿಯ ಸೌಂದರ್ಯವನ್ನೇ ತನ್ನೊಡಲಲ್ಲಿ ಹುದುಗಿಸಿಕೊಂಡಿರುವ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯನ್ನು ಗ್ರಾಮಸ್ಥರೆಲ್ಲರೂ ಒಟ್ಟಾಗಿ ಆಚರಿಸಿಕೊಂಡು ಬರುತ್ತಿರುವುದು ವಿಶೇಷ.
ಜಾತ್ರೆಯನ್ನು ಈ ವ್ಯಾಪ್ತಿಯ ಜನತೆ ಹಬ್ಬದ ರೀತಿಯಲ್ಲಿ ಸಂಭ್ರಮಿಸುತ್ತಾರೆ. ಉದ್ಯೋಗ ಸೇರಿದಂತೆ ಇನ್ನಿತರ ಕಾರ್ಯ ನಿಮಿತ್ತ ಹೊರಭಾಗದಲ್ಲಿ ನೆಲೆಸಿರುವ ಮಂದಿಯೂ ಸಹ ಈ ಜಾತ್ರೆಯಲ್ಲಿ ಒಟ್ಟಾಗುವುದರಿಂದ ಇಡೀ ಗ್ರಾಮವೇ ಸಂಭ್ರಮದಲ್ಲಿರುತ್ತದೆ. ಇದರೊಂದಿಗೆ ಸಾರ್ವಜನಿಕರಿಗೆ ವಿವಿಧ ಕ್ರೀಡಾಕೂಟಗಳನ್ನು ಏರ್ಪಡಿಸುವ ಮೂಲಕ ಎಲ್ಲರನ್ನೂ ಒಂದುಗೂಡಿಸುವ ಪ್ರಯತ್ನ ಶ್ರೀಕುಮಾರಲಿಂಗೇಶ್ವರ ಯುವಕ ಸುತ್ತಮುತ್ತಲೂ ಬೆಟ್ಟದ ಸಾಲು, ಹಚ್ಚಹಸಿರಿನ ಪ್ರಕೃತಿಯ ಸೌಂದರ್ಯವನ್ನೇ ತನ್ನೊಡಲಲ್ಲಿ ಹುದುಗಿಸಿಕೊಂಡಿರುವ ಶಾಂತಳ್ಳಿ ಗ್ರಾಮದಲ್ಲಿ ನೆಲೆಯಾಗಿರುವ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯನ್ನು ಗ್ರಾಮಸ್ಥರೆಲ್ಲರೂ ಒಟ್ಟಾಗಿ ಆಚರಿಸಿಕೊಂಡು ಬರುತ್ತಿರುವುದು ವಿಶೇಷ.
ಜಾತ್ರೆಯನ್ನು ಈ ವ್ಯಾಪ್ತಿಯ ಜನತೆ ಹಬ್ಬದ ರೀತಿಯಲ್ಲಿ ಸಂಭ್ರಮಿಸುತ್ತಾರೆ. ಉದ್ಯೋಗ ಸೇರಿದಂತೆ ಇನ್ನಿತರ ಕಾರ್ಯ ನಿಮಿತ್ತ ಹೊರಭಾಗದಲ್ಲಿ ನೆಲೆಸಿರುವ ಮಂದಿಯೂ ಸಹ ಈ ಜಾತ್ರೆಯಲ್ಲಿ ಒಟ್ಟಾಗುವುದರಿಂದ ಇಡೀ ಗ್ರಾಮವೇ ಸಂಭ್ರಮದಲ್ಲಿರುತ್ತದೆ. ಇದರೊಂದಿಗೆ ಸಾರ್ವಜನಿಕರಿಗೆ ವಿವಿಧ ಕ್ರೀಡಾಕೂಟಗಳನ್ನು ಏರ್ಪಡಿಸುವ ಮೂಲಕ ಎಲ್ಲರನ್ನೂ ಒಂದುಗೂಡಿಸುವ ಪ್ರಯತ್ನ ಶ್ರೀಕುಮಾರಲಿಂಗೇಶ್ವರ ಯುವಕ ಸಂಘದಿAದ ಪ್ರತಿವರ್ಷ ನಡೆಯುತ್ತಿದೆ.
ಇಂದು ಸಮಾರೋಪ: ತಾ. ೧೭ರಂದು (ಇಂದು) ೩ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಚಿವ ಬಿ.ಎ. ಜೀವಿಜಯ, ಮಾಜಿ ಎಂ.ಎಲ್.ಸಿ.ಗಳಾದ ಎಸ್.ಜಿ. ಮೇದಪ್ಪ, ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ಹೈಕೋರ್ಟ್ ವಕೀಲ ಎಚ್.ಎಸ್. ಚಂದ್ರಮೌಳಿ, ಎ.ಎಸ್. ಪೊನ್ನಣ್ಣ, ಉದ್ಯಮಿಗಳಾದ ಬಿ.ಈ.ರಾಮಚಂದ್ರ, ಎನ್.ಎಂ. ಮುತ್ತಪ್ಪ, ಕಾಂಗ್ರೆಸ್ ಮುಖಂಡ ಡಾ.ಮಂಥರ್‌ಗೌಡ, ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಭಾಗವಹಿಸಲಿದ್ದಾರೆ.ಇವರೊಂದಿಗೆ ದಾನಿಗಳಾದ ಎಚ್.ಎಸ್. ಚೇತನ್, ಕೆ.ಟಿ. ಸತೀಶ್, ದಿನೇಶ್, ತೇಜಸ್, ಸಂತೋಷ್, ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಸೇರಿದಂತೆ ವಿವಿಧ ಗ್ರಾಪಂ ಅಧ್ಯಕ್ಷರುಗಳಾದ ಆರ್.ವಿಶಾಲಾಕ್ಷಿ, ನವೀನ್, ಲಕ್ಷಿö್ಮ ಪಾಂಡಿಯನ್, ಮಹೇಶ್ ತಿಮ್ಮಯ್ಯ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪ್ಪ, ಕುಮಾರಲಿಂಗೇಶ್ವರ ಯುವಕ ಸಂಘದ ಅಧ್ಯಕ್ಷ ಜಿ.ಎಂ.ಸಜನ್ ಮಂದಣ್ಣ ಭಾಗವಹಿಸಲಿದ್ದಾರೆ ಎಂದರು.
ದೇವಾಲಯ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ. ಲೋಕೇಶ್, ಶಾಂತಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಮುತ್ತಣ್ಣ, ಧರ್ಮದರ್ಶಿ ಮಂಡಳಿ ಕಾರ್ಯದರ್ಶಿ ಕೆ.ಕೆ.ಮುತ್ತಣ್ಣ, ಪದಾಧಿಕಾರಿ ಕೆ.ಎಸ್.ರಮೇಶ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಮಧುಕುಮಾರ್ ಸೇರಿದಂತೆ ಇತರರು ಜಾತ್ರೋತ್ಸವದ ಉಸ್ತುವಾರಿ ವಹಿಸಿದ್ದರು.
- ವಿಜಯ್ ಹಾನಗಲ್