ಪೊನ್ನAಪೇಟೆ, ಜ. ೧೭: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಕರೆಯಲಾಗಿದ್ದ, ಕೆಡಿಪಿ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣ ಸಭೆಯನ್ನು ಮುಂದೂಡಲಾಯಿತು.
ಸಭೆಗೆ ಇಲಾಖಾ ಮಾಹಿತಿಗಳೊಂದಿಗೆ ಆಗಮಿಸುವಂತೆ ಪೊನ್ನಂಪೇಟೆ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ಪತ್ರ ಮುಖೇನ ಮತ್ತು ಫೋನ್ ಕರೆ ಮೂಲಕ ತಿಳಿಸಲಾಗಿತ್ತು. ಆದರೆ ಸಹಾಯಕ ಕೃಷಿ ಅಧಿಕಾರಿ, ಸಹಾಯಕ ತೋಟಗಾರಿಕಾ ಅಧಿಕಾರಿ, ಚೆಸ್ಕಾಂ ಇಲಾಖೆ ಸಿಬ್ಬಂದಿ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್, ವಿಎಸ್ಎಸ್ಎನ್, ಶಾಲಾ ಮುಖ್ಯೋಪಾಧ್ಯಯರು, ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳನ್ನು ಹೊರತು ಪಡಿಸಿ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿAಗ್ ಉಪವಿಭಾಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಸೇರಿದಂತೆ ಇಲಾಖೆಗಳ ಸಿಬ್ಬಂದಿ ಗೈರು ಹಾಜರಾಗಿದ್ದರಿಂದ ಸಭೆಯನ್ನು ಮುಂದೂಡಲಾಯಿತು.