ಕೂಡಿಗೆ, ಜ. ೧೮: ಕೂಡಿಗೆಯ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಪರಮಪೂಜ್ಯ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವ ಮತ್ತು ಶಾಲಾ ಸಮಾಜೋತ್ಸವವು ತಾ. ೨೧ ರಂದು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ದಿವ್ಯಸಾನಿಧ್ಯವನ್ನು ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಅಧ್ಯಕ್ಷರಾದ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢಶಾಲಾ ವ್ಯವಸ್ಥಾಪಕ ಎಂ.ಬಿ. ಮೊಣ್ಣಪ್ಪ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ, ಸದಸ್ಯ ಕೆ.ಟಿ. ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.
ತಾ. ೨೦ ರಂದು ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಚಾಲನೆ ನೀಡಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯ ದುರ್ಗೇಶ್ ತಿಳಿಸಿದ್ದಾರೆ.