ಸೋಮವಾರಪೇಟೆ, ಜ. ೧೭ : ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳ ಎರಡು ದಿನಗಳ ಪ್ರಶಿಕ್ಷಣ ವರ್ಗಕ್ಕೆ ಪಟ್ಟಣ ಸಮೀಪದ ಜಾನಕಿ ಕನ್ವೆನ್‌ಷನ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು, ಕುಟುಂಬ ಮತ್ತು ಸಮಾಜವನ್ನು ಮುನ್ನಡೆಸುವಲ್ಲಿ ಮಹಿಳೆಯರ ಪಾತ್ರ ಅಪಾರವಾದುದು. ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷವು ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ನೀಡಿದೆ. ಅವರುಗಳ ಸ್ವಾವಲಂಭಿ ಬದುಕಿಗೆ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ ಎಂದರು.

ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಬೇಕು. ಮಹಿಳಾ ಮೋರ್ಚಾವು ಸಂಘಟನೆಗೆ ಇನ್ನಷ್ಟು ಒತ್ತು ನೀಡಬೇಕು ಎಂದರು.

ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಹಿರಿಯರ ಪರಿಶ್ರಮದಿಂದ ಇಂದು ಭಾರತೀಯ ಜನತಾ ಪಾರ್ಟಿ ಸ್ಥಳೀಯ ಸಂಸ್ಥೆಗಳಿAದ ಹಿಡಿದು ರಾಜ್ಯ ರಾಷ್ಟçದಲ್ಲಿ ಅಧಿಕಾರದಲ್ಲಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ದೇಶದ ಅಭಿವೃದ್ಧಿಗೆ ಹೊಸ ಆಯಾಮ ಬಂದಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶರಿನ್ ಸುಬ್ಬಯ್ಯ, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ವಿಜಯಲಕ್ಷಿö್ಮÃ ಸುರೇಶ್, ಮಹಿಳಾ ಮೋರ್ಚಾ ಜಿಲ್ಲಾ ಉಸ್ತುವಾರಿ ಭಾಗೀರಥಿ ಅವರುಗಳು ಉಪಸ್ಥಿತರಿದ್ದರು.