ಮೂಲತಃ ಮಡಿಕೇರಿ ನಿವಾಸಿ, ಬೆಂಗಳೂರಿನಲ್ಲಿ ನೆಲೆಸಿದ್ದ ಮುಕ್ಕಾಟಿ ವಾಸುದೇವ್(೮೦) ತಾ. ೧೭ ರಂದು ನಿಧನರಾದರು. ವಕೀಲರಾಗಿದ್ದ ವಾಸುದೇವ್ ಅವರು ಮಡಿಕೇರಿ ಪುರಸಭೆಯ ಅಧ್ಯಕ್ಷರಾಗಿ, ಕೊಡಗು ಗೌಡ ಸಮಾಜದ ಸ್ಥಾಪಕ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ಅಂತ್ಯಕ್ರಿಯೆ ತಾ. ೧೮ ರಂದು (ಇಂದು) ಬೆಂಗಳೂರಿನ ಬೊಮ್ಮಸಂದ್ರದಲ್ಲಿ ನಡೆಯಲಿದೆ. ಮೃತರು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸಂತಾಪ: ವಾಸುದೇವ್ ಅವರ ನಿಧನಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ, ಯುವ ಮುಖಂಡ ಡಾ. ಮಂಥರ್ ಗೌಡ, ಮಾಜಿ ಸಚಿವ ಬಿ.ಎ.ಜೀವಿಜಯ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್, ಜಿ.ಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕಸಾಪ ಅಧ್ಯಕ್ಷ ಕೇಶವ ಕಾಮತ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಹಾಗೂ ಇತರರು ಸಂತಾಪ ಸೂಚಿಸಿದ್ದಾರೆ. ತಾ. ೧೮ ರಂದು (ಇಂದು) ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಕಸಾಪ ಕಚೇರಿಯಲ್ಲಿ ಸಂತಾಪ ಸಭೆ ನಡೆಯಲಿದೆ.