ಕುಶಾಲನಗರ, ಜ. ೧೭: ಕೂಡಿಗೆ ಗ್ರಾಮ ಪಂಚಾಯಿತಿ ಆಡಳಿತ ಕಳೆದ ೩ ತಿಂಗಳಿನಿAದ ಅಭಿವೃದ್ಧಿ ಕುಂಠಿತಗೊಳ್ಳುವುದರೊAದಿಗೆ ಅರಾಜಕತೆಯಿಂದ ಕೂಡಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಆರೋಪಿಸಿದ್ದಾರೆ.

ಕುಶಾಲನಗರ ಪತ್ರಿಕಾ ಭವನದಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಂಚಾಯಿತಿ ಅಧ್ಯಕ್ಷೆ ಸ್ವೇಚ್ಚಾಚಾರದಿಂದ ವರ್ತಿಸುವ ಮೂಲಕ ಪಂಚಾಯಿತಿ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರ ಪತಿ ತನ್ನ ಹಕ್ಕು ಪ್ರತಿಪಾದನೆ ಮಾಡುತ್ತಿದ್ದು, ಇದರೊಂದಿಗೆ ಪಂಚಾಯಿತಿ ಸದಸ್ಯರ ಹಲ್ಲೆಗೆ ಮುಂದಾಗಿರುವುದು ಖಂಡನೀಯ ಎಂದಿದ್ದಾರೆ. ಇಂತಹ ಕೃತ್ಯಗಳಿಗೆ ಪರೋಕ್ಷವಾಗಿ ಬಿಜೆಪಿ ಪಕ್ಷ ಹಾಗೂ ಕ್ಷೇತ್ರ ಶಾಸಕರು ಕಾರಣರಾಗಿದ್ದಾರೆ ಎಂದು ಆರೋಪಿಸಿದರು.

ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳ ಪ್ರಕಾಶ್ ತಕ್ಷಣ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಪಂಚಾಯಿತಿ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದ ಸದಸ್ಯರ ಮೇಲೆ ಅಧ್ಯಕ್ಷರ ಪತಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿರುವುದು ಅಕ್ಷಮ್ಯ ಅಪರಾಧ ಎಂದು ಹೇಳಿದ ಶಶಿಧರ್, ದೌರ್ಜನ್ಯ ಕಾಯ್ದೆಯಡಿ ಆರೋಪಿಯನ್ನು ಇನ್ನೂ ಬಂಧಿಸಿಲ್ಲ. ಡಿವೈಎಸ್‌ಪಿ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಧ್ಯಪ್ರವೇಶ ಮಾಡಬೇಕು. ಆಡಳಿತ ಪಕ್ಷದ ಒತ್ತಡದೊಂದಿಗೆ ಅಧಿಕಾರಿಗಳು ಕ್ಷೇತ್ರ ಶಾಸಕರ ಕೈಗೊಂಬೆಯAತೆ ವರ್ತಿಸುತ್ತಿರುವುದು ಸರಿಯಲ್ಲ ಎಂದರು. ಈ ಹಿನ್ನೆಲೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಪಕ್ಷದ ವತಿಯಿಂದ ಡಿವೈಎಸ್‌ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭ ಮಾತನಾಡಿದ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ಪಂಚಾಯಿತಿಯಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಇದನ್ನು ಪ್ರತಿಭಟಿಸಿ ಸಭಾತ್ಯಾಗ ಮಾಡಿದ ಸದಸ್ಯರ ಮೇಲೆ ಪಂಚಾಯಿತಿ ಅಧ್ಯಕ್ಷರು ಪೊಲೀಸ್ ದೂರು ನೀಡಿದ್ದಾರೆ. ಪಂಚಾಯಿತಿ ಸಭೆಯಲ್ಲಿ ಸದಸ್ಯರಿಗೆ ರಕ್ಷಣೆಯ ಕೊರತೆಯಿದೆ ಎಂದು ಹೇಳಿದರು. ಪಂಚಾಯಿತಿ ಸದಸ್ಯ ಅರುಣ್ ರಾವ್ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಅಧ್ಯಕ್ಷೆಯ ಪತಿ ಪ್ರಕಾಶ್ ಎಂಬವರನ್ನು ಕೂಡಲೇ ಬಂಧಿಸಬೇಕೆAದು ಆಗ್ರಹಿಸಿದರು.

ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಅನಂತ್, ಹೆಚ್.ಆರ್. ಚಂದ್ರು ಮತ್ತು ಮಾಜಿ ಸದಸ್ಯ ಎನ್.ಕೆ. ಚಂದ್ರು ಇದ್ದರು.