ಮಡಿಕೇರಿ, ಜ. ೧೭ : ತಾ. ೨೬ ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕೃತಿಕ, ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ ಸಂಬAಧಿಸಿದAತೆ ಐದು ತಂಡಗಳಿಗೆ ಅವಕಾಶ ನೀಡುವಂತೆ, ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಸೂಚಿಸಿದರು.

ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟçಪಿತ ಮಹಾತ್ಮ ಗಾಂಧೀಜಿ ಪ್ರತಿಮೆ, ರಾಷ್ಟçಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕಾ÷್ವಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಕ್ರೀಡಾಂಗಣ ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆ ಸಂಬAಧಿಸಿದAತೆ, ಕ್ರೀಡಾಂಗಣದಲ್ಲಿ ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬAಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ಹೆಚ್ಚಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಬೇಕು ಎಂದು ಕೋರಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಯ್ಯ, ಕಾರ್ಮಿಕ ಇಲಾಖಾ ಅಧಿಕಾರಿ ಅನಿಲ್ ಬಗಟಿ, ಇತರರು ಹಲವು ವಿಷಯ ಕುರಿತು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ರಾಷ್ಟಿçÃಯ ಹಬ್ಬಗಳಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಕೋರಿದರು.

ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಘಟಕರಾದ ದಮಯಂತಿ, ಗಣರಾಜ್ಯೋತ್ಸವ ದಿನಾಚರಣೆ ಸಂಬAಧ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಒ ಡಾ. ಎಸ್. ಆಕಾಶ್, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.