ಪೊನ್ನಂಪೇಟೆ, ಜ. ೧೭: ಜಿಲ್ಲೆಯ ಹಲವು ದೇವಸ್ಥಾನಗಳಲ್ಲಿ ಘಂಟೆ ಕಳವು ಪ್ರಕರಣದಲ್ಲಿ ಸಿಕ್ಕಿಬಿದ್ದು, ನ್ಯಾಯಾಂಗ ಬಂಧನದಲ್ಲಿದ್ದ ನಾಲ್ವರು ಆರೋಪಿಗಳನ್ನು ಪೊನ್ನಂಪೇಟೆ ಪೊಲೀಸರು ಬಾಡಿ ವಾರೆಂಟ್ ಮೇಲೆ ಕರೆತಂದು ಮಹಜರು ನಡೆಸಿದರು.

ಘಂಟೆ ಕಳವು ಆಗಿದ್ದ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ದೇವಸ್ಥಾನಗಳಾದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನ, ನಿಟ್ಟೂರು ಕಾರ್ಮಾಡಿನ ಶ್ರೀ ಕಾಲ ಭೈರವೇಶ್ವರ ದೇವಸ್ಥಾನ, ಬಿಳೂರಿನ ಕಲ್ಲುಗುಡಿ ಶ್ರೀ ಈಶ್ವರ ದೇವಸ್ಥಾನ, ಬೆಸಗೂರಿನ ಶ್ರೀ ಮಹದೇಶ್ವರ ದೇವಸ್ಥಾನ ಮತ್ತು ಶ್ರೀ ದುರ್ಗಿ ದೇವಸ್ಥಾನಗಳಿಗೆ ಕರೆದೊಯ್ದು ಆರೋಪಿಗಳಿಂದ ಮಾಹಿತಿ ಪಡೆದು ಮಹಜರು ನಡೆಸಲಾಯಿತು. ಠಾಣಾಧಿಕಾರಿ ಹೆಚ್.ಸಿ. ಸುಬ್ರಮಣಿ, ಮುಖ್ಯ ಪೇದೆ ಪ್ರಮೋದ್ ಕುಮಾರ್, ಸಿಬ್ಬಂದಿಗಳಾದ ಮಹದೇಶ್ವರ ಸ್ವಾಮಿ, ಜೀವನ್, ಮಂಜುನಾಥ್ ಹಾಗೂ ಬಸವರಾಜ್ ಭಾಗವಹಿಸಿದ್ದರು.