ಕುಶಾಲನಗರ, ಜ. ೧೭: ಮಹಿಳೆಯೊಬ್ಬರು ನಿಗೂಢವಾಗಿ ಸಾವಿಗೀಡಾದ ಪ್ರಕರಣ ಕುಶಾಲನಗರ ಸಮೀಪದ ಬೈಲುಕೊಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪಗ್ರಾಮ ಸಮೀಪದ ಮುತ್ತಿನ ಮುಳ್ಳುಸೋಗೆ ಬಳಿ ಕಲಾವತಿ (೩೦) ಎಂಬಾಕೆಯ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾಗಿದ್ದು, ಘಟನೆಗೆ ಸಂಬAಧಿಸಿದAತೆ ಆಕೆಯ ಪತಿ ಶಶಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
ಪತ್ನಿಯನ್ನು ಕೊಲೆ ಮಾಡಿ ಬಾವಿಗೆ ಹಾಕಿರುವ ಬಗ್ಗೆ ಮಹಿಳೆಯ ಕುಟುಂಬ ಸದಸ್ಯರು ಶಶಿಕುಮಾರ್ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಬೈಲುಕೊಪ್ಪೆ ಪೊಲೀಸ್ ಠಾಣೆ ಮುಂಭಾಗ ಸೇರಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಸ್ಥಳಕ್ಕೆ ಬೈಲುಕೊಪ್ಪೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್, ಠಾಣಾಧಿಕಾರಿ ಬಸವರಾಜ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಮಹಜರು ನಡೆಸಿ ಕ್ರಮಕೈಗೊಂಡಿದ್ದಾರೆ.
ಮೃತ ಮಹಿಳೆ ಕುಶಾಲನಗರ ಬೇಕರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.