ಕೂಡಿಗೆ, ಜ. ೧೭: ವಿದ್ಯಾರ್ಥಿ ಗಳು ಅತ್ಮಸ್ಥೆöÊರ್ಯವನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಎದುರಾಗು ವಂತಹ ಕಠಿಣ ಪರಿಸ್ಥಿತಿ ಗಳನ್ನು ಎದುರಿಸಲು ಸಹಕಾರಿ ಯಾಗುತ್ತದೆ. ಜೊತೆಗೆ ಜೀವನದಲ್ಲಿ ಸ್ಪಷ್ಟವಾದ ಗುರಿಯೊಂದಿಗೆ ಸಾಗಿದರೆ ಯಶಸ್ಸು ಸಾಧಿಸಬಹುದು, ವಿದ್ಯಾರ್ಥಿಗಳು ಜ್ಞಾನಾಭಿವೃದ್ಧಿ ಕಡೆಗೆ ಗಮನ ಹರಿಸಬೇಕು ಎಂದು ಕೂಡಿಗೆ ಡಯಟ್‌ನ ಪ್ರಾಂಶುಪಾಲ ಎಂ. ಮಲ್ಲೇಶಪ್ಪ ಅವರು ಕೂಡಿಗೆ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ. ಪುಟ್ಟರಾಜು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಸಂಯಮ ಜೊತೆಗೆ ಕಠಿಣ ಪರಿಶ್ರಮದೊಂದಿಗೆ ಉತ್ತಮವಾದ ಮೌಲ್ಯಗಳನ್ನು ಮೈಗೂಡಿಸಿಕೊಂಡಲ್ಲಿ ಭವಿಷ್ಯದಲ್ಲಿ ಜೀವನಕ್ಕೆ ದಾರಿಯಾಗಲಿದೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಎಲ್ಲಾ ರಂಗದಲ್ಲಿ ಪ್ರತಿಭಾವಂತರಾಗಿ, ಅಧ್ಯಾಯ ಶೀಲರಾಗಬೇಕು ಈ ಮೂಲಕ ಚೇತರಿಕೆ ಚೈತನ್ಯದ ಬೆಳವಣಿಗೆಗೆ ಪೂರಕವಾಗಲಿದೆ ಎಂದರು. ಇದೇ ಸಂದರ್ಭ ವಿವೇಕಾನಂದನ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲ ಡಾ. ಕೆ.ಬಿ. ಬಸಪ್ಪ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಸ್.ವಿ. ಯೋಗೇಶ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಸದಸ್ಯರಾದ ಎಂ. ಜೆ. ಮಹೇಶ್, ಜನಾರ್ದನ್ ಸೇರಿದಂತೆ ಕಾಲೇಜು ಉಪನ್ಯಾಸಕ ವೃಂದ ಹಾಜರಿದ್ದರು.

ಕಾಲೇಜು ವರದಿ ವಾಚನವನ್ನು ಉಪನ್ಯಾಸಕ ಸತೀಶ್ ವಾಚಿಸಿದರು. ನಂತರ ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ಈ ಸಂದರ್ಭ ನಡೆದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾ ದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.