ಕುಶಾಲನಗರ, ಜ. ೧೮: ಕುಶಾಲನಗರ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಸಂಬAಧ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ತಾಲೂಕು ತಹಶೀಲ್ದಾರ್ ಹಾಗೂ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು. ಉಪಸಮಿತಿಗಳನ್ನು ರಚಿಸುವ ಸಂದರ್ಭ ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲು ತಹಶೀಲ್ದಾರ್ ಗಮನ ಸೆಳೆಯಲಾಯಿತು. ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಗೈರು ಹಾಜರಾಗಿರುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಸೇನಾ ಅಧಿಕಾರಿಗಳನ್ನು ಆಯ್ಕೆ ಮಾಡುವುದು, ಪತ್ರಕರ್ತರು ಸೇರಿದಂತೆ ಸಮಾಜ ಸೇವಕರನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸುವ ಬಗ್ಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಕಾರಣ ನದಿ, ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಲಾಯಿತು.
ಈ ಸಂದರ್ಭ ಪುರಸಭೆ ಅಧ್ಯಕ್ಷ ಜಯವರ್ಧನ್, ಉಪಾಧ್ಯಕ್ಷೆ ಸುರಯ್ಯಭಾನು, ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆ.ಎಸ್. ಮೂರ್ತಿ, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಅಧಿಕಾರಿಗಳು, ಶಾಲಾ ಶಿಕ್ಷಕರು ಇದ್ದರು.