ಕುಶಾಲನಗರ: ಕುಶಾಲನಗರ ಪಟ್ಟಣದ ಫಾತೀಮಾ ಕಾನ್ವೆಂಟ್ ಶಾಲೆಯಲ್ಲಿ ಮಕರ ಸಂಕ್ರಾAತಿ ಹಬ್ಬವನ್ನು ಸಂಭ್ರಮದಿAದ ಆಚರಣೆ ಮಾಡಲಾಯಿತು. ಕಾನ್ವೆಂಟ್ ಶಾಲೆಯ ವ್ಯವಸ್ಥಾಪಕಿ ಸಿಸ್ಟರ್ ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕರ ಸಂಕ್ರಾAತಿ ಸಮೃದ್ಧಿಯ ಸಂಕೇತವಾಗಿದೆ ಎಂದರು. ಈ ಸಂದರ್ಭ ಫಾತೀಮಾ ಕಾನ್ವೆಂಟ್ ಶಾಲೆಯ ಡಾ. ಸಿಸ್ಟರ್ ಜೆಸ್ವಿನಾ, ತೆರೇಸ್‌ನ್ ಹಾಗೂ ಶಾಲಾ ಆಡಳಿತ ಮಂಡಳಿಯವರು ಮತ್ತು ಶಾಲಾ ಶಿಕ್ಷಕ ವೃಂದದವರು ಹಾಜರಿದ್ದರು.ಮುಳ್ಳೂರು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲಾಖೆಯ ಸಂಭ್ರಮ ಶನಿವಾರ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳು ಸಂಕ್ರಾAತಿ ಹಬ್ಬವನ್ನು ಆಚರಿಸಿದರು. ಶಾಲೆಯ ಕ್ರಿಯಾಶೀಲ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಭಾರತದ ವಿವಿಧ ರಾಜ್ಯಗಳ ಆಚಾರ ವಿಚಾರ, ಉಡುಗೆ ತೊಡುಗೆ, ಸಂಸ್ಕೃತಿ ಮುಂತಾದ ಪರಂಪರೆಗಳ ಬಗ್ಗೆ ಅರಿವು ಮೂಡಿಸಲಾಯಿತು. ಶಾಲಾ ಆವರಣದಲ್ಲಿ ಭಾರತೀಯ ಹಳ್ಳಿಯ ಸಂಸ್ಕೃತಿಯನ್ನು ಬಿಂಬಿಸುವAತ ವಾತಾವರಣ ಸೃಷ್ಟಿಸಿ ಅಲ್ಲಿ ಗುಡಿಸಲು, ಎತ್ತಿನಗಾಡಿ, ಭತ್ತದ ಕಣಜ, ಕೋಳಿ, ಹಸು ಇನ್ನು ಮುಂತಾದ ಹಳ್ಳಿ ಸೊಗಡಿನ ವಸ್ತುಗಳಿಂದ ಆಕರ್ಷಣಿಯ ಪರಿಸರ ನಿರ್ಮಾಣ ಮಾಡಲಾಗಿತ್ತು. ಮಕ್ಕಳು ಭಾರತದ ವಿವಿಧ ರಾಜ್ಯಗಳಲ್ಲಿ ಜನರು ತೊಡುವ ಸಾಂಪ್ರದಾಯಿಕ ಉಡುಗೆ, ವೇಷಭೂಷಣ ಧರಿಸಿ ಗಮನ ಸೆಳೆದರು. ಪೊಂಗಲ್ ಸಿಹಿ ಊಟ ವಿತರಣೆ ನಡೆಯಿತು. ಶಾಲೆಯ ಅತಿಥಿ ಶಿಕ್ಷಕಿ ಎಂ.ಆರ್. ನವ್ಯ ಹಾಜರಿದ್ದರು.ಮಡಿಕೇರಿ: ಸಂಪಾಜೆಯ ಜೇಡ್ಲದಲ್ಲಿರುವ ಶ್ರೀ ರಾಮಚಂದ್ರಪುರ ಮಠದ ಅಧೀನದಲ್ಲಿರುವ ಗೋಪಾಲಕೃಷ್ಣ ದೇವಕಿ ಪಶು ಸಂಗೋಪನಾ ಕೇಂದ್ರದಲ್ಲಿ ಮಕರ ಸಂಕ್ರಾAತಿ ಪ್ರಯುಕ್ತ ಗೋವುಗಳ ಆರೋಗ್ಯ ಸುಧಾರಣೆ ಹಾಗೂ ಗ್ರಾಮದ ಕ್ಷೇಮಾಭಿವೃದ್ಧಿಗೆ ಪ್ರಾರ್ಥಿಸಿ ಗೋಪೂಜೆ ಮತ್ತು ಗೋವುಗಳ ಕಿಚ್ಚು ಹಾಯಿಸುವ ವಿನೂತನ ಕಾರ್ಯಕ್ರಮವನ್ನು ಗೋಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಯಲುಸೀಮೆಯಲ್ಲಿ ಚಿರಪರಿಚಿತವಾಗಿದ್ದ ಸುಗ್ಗಿಹಬ್ಬದ ಈ ಕಾರ್ಯಕ್ರಮವನ್ನು ಪ್ರಥಮ ಬಾರಿಗೆ ಇಲ್ಲಿ ಆಚರಿಸಲಾಯಿತು. ಅಲಂಕರಿಸಿದ್ದ ಗೋವುಗಳನ್ನು ಮೆರವಣಿಗೆ ಮೂಲಕ ಕಾರ್ಯಕ್ರಮಕ್ಕೆ ಕರೆತರಲಾಯಿತು. ಸುಳ್ಯದ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನಿತಿನ್ ಪ್ರಭು ಕಾರ್ಯಕ್ರಮ ಉದ್ಘಾಟಿಸಿ, ಗೋವುಗಳನ್ನು ಕಿಚ್ಚು ಹಾಯಿಸುವುದರ ಪ್ರಾಮುಖ್ಯತೆ ಹಾಗೂ ಇದರ ಹಿಂದೆ ಇರುವ ವೈಜ್ಞಾನಿಕ ಕಾರಣವನ್ನು ವಿವರಿಸಿದರು. ಗೋಶಾಲೆಯ ಪ್ರಧಾನ ಕಾರ್ಯದರ್ಶಿ ವಿಜಯಕೃಷ್ಣ ಕಬ್ಬಿನಗದ್ದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲ್ಲುಗುಂಡಿಯ ವೈದ್ಯ ಡಾ. ಜಯರಾಮ್ ಭಟ್ ಅವರು ಗೋಬಂಧು ಯೋಜನೆಯನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಶಾಲೆಯ ಕಾರ್ಯಾಧ್ಯಕ್ಷ ಡಾ. ರಾಜಾರಾಮ್ ಅಖಿಲಾತಿ ವಹಿಸಿದ್ದರು. ನಿರಂತರ ಗೋಸೇವೆಯಲ್ಲಿ ತೊಡಗಿಸಿಕೊಂಡಿರುವ ನಾಲ್ವರು ಗೋಪ್ರೇಮಿಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮೊದಲು ಕಾರ್ಯಕ್ರಮದ ಮುಖ್ಯ ಭಾಗವಾಗಿ ಗೋವುಗಳನ್ನು ಕಿಚ್ಚು ಹಾಯಿಸಿ ನಂತರ ಗೋಪೂಜೆ ನೆರವೇರಿಸಿ ಗೋವುಗಳಿಗೆ ಬೆಲ್ಲವನ್ನು ತಿನ್ನಿಸಲಾಯಿತು. ಗವ್ಯಾಧಾರಿತ ಗೊಬ್ಬರವನ್ನು ಈ ಸಂದರ್ಭ ಬಿಡುಗಡೆಗೊಳಿಸಲಾಯಿತು. ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ನಿರ್ಮಲ ಭರತ್, ಕೊಡಗು, ಸುಳ್ಯ, ಗುತ್ತಿಗಾರು, ಈಶ್ವರ ಮಂಗಲ ಹವ್ಯಕ ವಲಯದ ಅಧ್ಯಕ್ಷರುಗಳು, ಗುರಿಕ್ಕಾರರು, ಪದಾಧಿಕಾರಿಗಳು, ಗೋಪ್ರೇಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.